ಧೋನಿ 
ಕ್ರಿಕೆಟ್

ಧೋನಿ 43ನೇ ಹುಟ್ಟುಹಬ್ಬಕ್ಕೆ ಬಿಗ್ ಗಿಫ್ಟ್: ತೆಲುಗು ಅಭಿಮಾನಿಗಳಿಂದ 100 ಅಡಿ ಕಟೌಟ್!

ಆಂಧ್ರಪ್ರದೇಶದ ನಂದಿಗ್ರಾಮದ ತೆಲುಗು ಅಭಿಮಾನಿಗಳು ಈ ಬಾರಿ ಧೋನಿಯ 100 ಅಡಿ ಕಟೌಟ್ ನಿಲ್ಲಿಸುವ ಮೂಲಕ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಲು ತಯಾರಿ ನಡೆಸಿದ್ದಾರೆ.

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಾಳೆ 43ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಇದರ ಅಂಗವಾಗಿ ಅವರ ಅಭಿಮಾನಿಗಳ ಅತ್ಯಂತ, ಸಡಗರ ಸಂಭ್ರಮದಿಂದ ಹುಟ್ಟುಹಬ್ಬ ಆಚರಿಸಲು ಸಜ್ಜಾಗಿದ್ದಾರೆ.

ಈ ಮಧ್ಯೆ ಆಂಧ್ರಪ್ರದೇಶದ ನಂದಿಗ್ರಾಮದ ತೆಲುಗು ಅಭಿಮಾನಿಗಳು ಈ ಬಾರಿ ಧೋನಿಯ 100 ಅಡಿ ಕಟೌಟ್ ನಿಲ್ಲಿಸುವ ಮೂಲಕ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಲು ತಯಾರಿ ನಡೆಸಿದ್ದಾರೆ. ಕಳೆದ ಬಾರಿ 77 ಅಡಿ ಕಟೌಟ್ ನಿಲ್ಲಿಸಿದ್ದ ಅಭಿಮಾನಿಗಳು ಈ ಬಾರಿ 100 ಅಡಿ ಕಟೌಟ್ ನಿಲ್ಲಿಸುವ ಮೂಲಕ ವಿಶೇಷ ಅಭಿಮಾನ ಮೆರೆದಿದ್ದಾರೆ.

ರಾಂಚಿಯಲ್ಲಿ ಜನಿಸಿದ ‘ಮಹಿ’ ಭಾರತೀಯ ಕ್ರಿಕೆಟ್‌ಗೆ ಹಲವು ಶ್ರೇಷ್ಠ ಗೆಲುವನ್ನು ತಂದುಕೊಟ್ಟಿದ್ದಾರೆ. ಧೋನಿ ನಾಯಕತ್ವದಲ್ಲಿ ಭಾರತ ತಂಡ T20 ವಿಶ್ವಕಪ್, ODI ವಿಶ್ವಕಪ್, ICC ಚಾಂಪಿಯನ್ಸ್ ಟ್ರೋಫಿ ಮತ್ತು ಟೆಸ್ಟ್‌ನಲ್ಲಿ ನಂಬರ್ 1 ಸ್ಥಾನ ಪಡೆದಿತ್ತು. ಐಪಿಎಲ್‌ನಲ್ಲೂ 'ಮಹಿ' ಮಿಂಚಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್‌ಗೆ 5 ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಟ್ಟ ಧೋನಿ, ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದಾರೆ.

90 ಟೆಸ್ಟ್, 350 ಏಕದಿನ, ಮತ್ತು 98 ಟಿ20 ಪಂದ್ಯಗಳನ್ನು ಆಡಿರುವ ಧೋನಿ, ಪ್ರತಿಯೊಂದು ಮಾದರಿಯಲ್ಲೂ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಟೆಸ್ಟ್‌ನಲ್ಲಿ 4,876 ರನ್, ಏಕದಿನದಲ್ಲಿ 10,773 ಮತ್ತು ಟಿ20ಯಲ್ಲಿ 1,617 ರನ್ ಗಳಿಸಿರುವ ಧೋನಿ ಅದ್ಭುತ ಬ್ಯಾಟ್ಸ್‌ಮನ್ ಆಗಿದ್ದಾರೆ. 264 ಐಪಿಎಲ್ ಪಂದ್ಯಗಳಲ್ಲಿ 5,243 ರನ್ ಗಳಿಸಿರುವ ಧೋನಿ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT