ಸ್ಮೃತಿ ಮಂದಾನ 
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ 10 ವಿಕೆಟ್‌ ದಾಖಲೆಯ ಗೆಲುವು ಸಾಧಿಸಿದ ಟೀಂ ಇಂಡಿಯಾ: ಸಮಬಲದೊಂದಿಗೆ T20 ಸರಣಿ ಅಂತ್ಯ

ಪೂಜಾ ವಸ್ತ್ರಾಕರ್ ಮತ್ತು ರಾಧಾ ಯಾದವ್ ಅವರ ಅತ್ಯುತ್ತಮ ಬೌಲಿಂಗ್‌ನಿಂದಾಗಿ, ಭಾರತವು ಮೂರನೇ ಮತ್ತು ಅಂತಿಮ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 10 ವಿಕೆಟ್‌ಗಳಿಂದ ಸೋಲಿಸಿದೆ.

ಪೂಜಾ ವಸ್ತ್ರಾಕರ್ ಮತ್ತು ರಾಧಾ ಯಾದವ್ ಅವರ ಅತ್ಯುತ್ತಮ ಬೌಲಿಂಗ್‌ನಿಂದಾಗಿ, ಭಾರತವು ಮೂರನೇ ಮತ್ತು ಅಂತಿಮ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 10 ವಿಕೆಟ್‌ಗಳಿಂದ ಸೋಲಿಸಿದೆ. ಇನ್ನು 55 ಎಸೆತಗಳು ಬಾಕಿ ಇರುವಾಗಲೇ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ಸಾಧಿಸಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿ 1-1ರ ಸಮಬಲದೊಂದಿಗೆ ಅಂತ್ಯಗೊಂಡಿದೆ.

ವೇಗದ ಬೌಲರ್ ವಸ್ತ್ರಾಕರ್ (13 ರನ್‌ಗಳಿಗೆ 4 ವಿಕೆಟ್) ವೃತ್ತಿಜೀವನದ ಅತ್ಯುತ್ತಮ 4 ವಿಕೆಟ್ ಪಡೆದರೆ, ಎಡಗೈ ಸ್ಪಿನ್ನರ್ ರಾಧಾ (6 ರನ್‌ಗಳಿಗೆ 3 ವಿಕೆಟ್) 3 ವಿಕೆಟ್ ಪಡೆದರು. ದಕ್ಷಿಣ ಆಫ್ರಿಕಾ 17.1 ಓವರ್‌ಗಳಲ್ಲಿ 84 ರನ್‌ಗಳಿಗೆ ಆಲೌಟ್ ಆಯಿತು. ಭಾರತ 10.5 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 88 ರನ್ ಗಳಿಸಿ ಸುಲಭ ಜಯ ದಾಖಲಿಸಿತು. ಸ್ಮೃತಿ ಮಂಧಾನ 40 ಎಸೆತಗಳಲ್ಲಿ 54 ರನ್ ಮತ್ತು ಶೆಫಾಲಿ ವರ್ಮಾ 25 ಎಸೆತಗಳಲ್ಲಿ 27 ರನ್ ಗಳಿಸಿ ಅಜೇಯರಾಗಿ ಉಳಿದರು.

ದಕ್ಷಿಣ ಆಫ್ರಿಕಾ ಮೊದಲ ಪಂದ್ಯವನ್ನು 12 ರನ್‌ಗಳಿಂದ ಗೆದ್ದುಕೊಂಡರೆ, ಎರಡನೇ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದಕ್ಕೂ ಮುನ್ನ ಭಾರತ ಏಕದಿನ ಸರಣಿಯಲ್ಲಿ 3-0 ಅಂತರದ ಗೆಲುವು ದಾಖಲಿಸಿದ್ದಲ್ಲದೆ, ಏಕೈಕ ಟೆಸ್ಟ್ ಪಂದ್ಯವನ್ನೂ ಗೆದ್ದುಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT