ಟೀಂ ಇಂಡಿಯಾ 
ಕ್ರಿಕೆಟ್

ಮಹಿಳಾ T20 ಏಷ್ಯಾ ಕಪ್: ಪಾಕಿಸ್ತಾನ ಮಣಿಸಿ ಶುಭಾರಂಭ ಮಾಡಿದ ಭಾರತ

ಮಹಿಳಾ ಏಷ್ಯಾ ಕಪ್ 2024ರ ಟೂರ್ನಿಯ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯಾದ ಪಾಕಿಸ್ತಾನವನ್ನು 7 ವಿಕೆಟ್ ಗಳಿಂದ ಮಣಿಸಿದ ಭಾರತ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಡಂಬುಲ್ಲಾ: ಮಹಿಳಾ ಏಷ್ಯಾ ಕಪ್ 2024ರ ಟೂರ್ನಿಯ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯಾದ ಪಾಕಿಸ್ತಾನವನ್ನು 7 ವಿಕೆಟ್ ಗಳಿಂದ ಮಣಿಸಿದ ಭಾರತ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಭಾರತೀಯ ಬೌಲರ್ ಗಳ ದಾಳಿಗೆ ತತ್ತರಿಸಿದ್ದು 108 ರನ್ ಗಳಿಗೆ ಆಲೌಟ್ ಆಯಿತು. ಇನ್ನು ಪಾಕಿಸ್ತಾನ ನೀಡಿದ 109 ರನ್ ಗುರಿ ಬೆನ್ನಟ್ಟಿದ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದೆ. 14.1 ಎಸೆತಗಳಲ್ಲಿ 109 ರನ್ ಬಾರಿಸಿ ಭಾರತ ಗೆಲುವಿನ ನಗೆ ಬೀರಿತು.

ಭಾರತ ಪರ ಶಫಾಲಿ ವರ್ಮಾ 40 ರನ್, ಸ್ಮೃತಿ ಮಂದಾನ 45 ರನ್ ಸಿಡಿಸಿ ಔಟಾದರೆ ಹೇಮಲತಾ 14 ರನ್ ಗಳಿಗೆ ಔಟಾದರು. ಇನ್ನು ನಾಯಕಿ ಹರ್ಮನ್ ಪ್ರೀತ್ ಕೌರ್ ಅಜೇಯ 5 ಮತ್ತು ಜೆಮಿಮಾ ರಾಡ್ರಿಗಸ್ ಅಜೇಯ 3 ರನ್ ಬಾರಿಸಿದ್ದಾರೆ.

ಶ್ರೀಲಂಕಾದ ಡಂಬುಲ್ಲಾದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿತು. ಆರಂಭಿಕರಾಗಿ ಕಣಕ್ಕಿಳಿದ ಗುಲ್ ಫಿರೋಜಾ 5 ರನ್ ಗಳಿಸಿ ಔಟಾದರೆ ಮೌನೀಬಾ ಅಲಿ 11 ರನ್ ಬಾರಿಸಿ ಔಟಾದರು. ನಂತರ ಬಂದ ಸಿರ್ದಾ ಅಮಿನ್ 25, ಟುಬಾ ಹಸನ್ 22 ಮತ್ತು ಫಾತಿಮಾ ಸನಾ ಅಜೇಯ 22 ರನ್ ಬಿಟ್ಟರೆ ಮತ್ಯಾರು ಎರಡಂಕಿ ದಾಟಲಿಲ್ಲ.

ಭಾರತದ ಪರ ಬೌಲಿಂಗ್ ನಲ್ಲಿ ದೀಪ್ತಿ ಶರ್ಮಾ 3, ರೇಣುಕಾ ಶರ್ಮಾ, ಪೂಜಾ ವಸ್ತ್ರಾಕರ್ ಮತ್ತು ಶ್ರೇಯಾಂಕ ಪಾಟೀಲ್ ತಲಾ 2 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT