ಶ್ರೇಯಾಂಕಾ ಪಾಟೀಲ್  
ಕ್ರಿಕೆಟ್

ಎಡಗೈ ಬೆರಳಿಗೆ ಗಾಯ: ಏಷ್ಯಾ ಕಪ್ ಟೂರ್ನಿಯಿಂದ ಶ್ರೇಯಾಂಕಾ ಪಾಟೀಲ್ ಹೊರಕ್ಕೆ!

ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.4 ಓವರ್​ಗಳಲ್ಲಿ 14 ರನ್ ನೀಡಿ 2 ವಿಕೆಟ್ ಗಳಿಸಿದ್ದರು.

ದಂಬುಲ್ಲಾ: ಟೀಮ್ ಇಂಡಿಯಾ ಮಹಿಳೆಯರ ತಂಡದ ಯುವ ಸ್ಟಾರ್ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಮಹಿಳಾ ಏಷ್ಯಾಕಪ್ 2024 ಟೂರ್ನಿಯಿಂದ ಹೊರಬಿದ್ದಿದ್ದಾರೆ. ಎಡಕೈಯ ಬೆರಳಿನ ಮೂಳೆ ಮುರಿತದಿಂದಾಗಿ ಅವರು ಭಾರತ ತಂಡದಿಂದ ಹೊರಗುಳಿದಿದ್ದಾರೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.4 ಓವರ್​ಗಳಲ್ಲಿ 14 ರನ್ ನೀಡಿ 2 ವಿಕೆಟ್ ಗಳಿಸಿದ್ದರು. ಇದೇ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಶ್ರೇಯಾಂಕಾ ಗಾಯಗೊಂಡಿದ್ದರು. ಅವರ ಎಡಗೈಯ ನಾಲ್ಕನೇ ಬೆರಳಿಗೆ ಮುರಿತವಾಗಿದ್ದು, ಹೀಗಾಗಿ ಟೂರ್ನಿಯಿಂದ ಹೊರಗುಳಿಯಲು ಬಯಸಿದರು.

ಶ್ರೇಯಾಂಕಾ ಬದಲಿಗೆ ತನುಜಾ ಕನ್ವರ್ ಅವರನ್ನು ಅಯ್ಕೆ ಮಾಡಲಾಗಿದೆ. 26 ವರ್ಷ ವಯಸ್ಸಿನ ಎಡಗೈ ಸ್ಪಿನ್ನರ್‌ ತುನುಜಾಗೆ ಇದು ಮೊದಲ ಅವಕಾಶ. ಇದಕ್ಕೂ ಮುನ್ನ ಏಷ್ಯಾಕಪ್​ಗಾಗಿ ಹೆಸರಿಲ್ಪಟ್ಟ ತಂಡದಲ್ಲಿ ತನುಜಾ ಮೀಸಲು ಆಟಗಾರ್ತಿಯರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸ್ಪಿನ್ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಹೊರಗುಳಿದಿರುವ ಕಾರಣ ತನುಜಾ ಕನ್ವರ್​ ಅವರನ್ನು ಬದಲಿ ಆಟಗಾರ್ತಿಯಾಗಿ ಆಯ್ಕೆ ಮಾಡಲಾಗಿದೆ.

ಭಾರತ ಮಹಿಳಾ ತಂಡವು ಏಷ್ಯಾಕಪ್​ನಲ್ಲಿ ಈಗಾಗಲೇ ಮೊದಲ ಪಂದ್ಯವನ್ನಾಡಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದೆ. ಇಂದು ನಡೆಯಲಿರುವ ಏಷ್ಯಾಕಪ್​ನ 5ನೇ ಪಂದ್ಯದಲ್ಲಿ ಭಾರತ ಮತ್ತು ಯುಎಇ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಏಷ್ಯಾಕಪ್ 2024 ರಲ್ಲಿ ಸೆಮಿಫೈನಲ್ ಆಡುವುದು ಖಚಿತವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT