ಭಾರತ ಮಹಿಳಾ ತಂಡ 
ಕ್ರಿಕೆಟ್

ಮಹಿಳಾ ಟಿ20 ಏಷ್ಯಾ ಕಪ್: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ದಾಖಲೆಯ 10 ವಿಕೆಟ್ ಜಯ; ಫೈನಲ್ ಗೆ ಪ್ರವೇಶ!

ಏಷ್ಯಾಕಪ್ ಟೂರ್ನಿಯಲ್ಲಿ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದ್ದು ಆ ಪಂದ್ಯದಲ್ಲಿ ಗೆದ್ದವರ ಜೊತೆ ಭಾರತ ಫೈನಲ್ ಪಂದ್ಯದಲ್ಲಿ ಸೆಣೆಸಲಿದೆ.

ಡಂಬುಲ್ಲಾ(ಶ್ರೀಲಂಕಾ): ಮಹಿಳಾ ಟಿ20 ಏಷ್ಯಾಕಪ್ ಮೊದಲ ಸೆಮಿಫೈನಲ್ ಪಂದ್ಯ ಭಾರತ ಹಾಗೂ ಬಾಂಗ್ಲಾದೇಶ ನಡುವೆ ನಡೆದಿದ್ದು ಭಾರತ 10 ವಿಕೆಟ್ ಗಳಿಂದ ಬಾಂಗ್ಲಾದೇಶವನ್ನು ಮಣಿಸಿ ಫೈನಲ್ ತಲುಪಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 80 ರನ್ ಪೇರಿಸಿತ್ತು. ಬಾಂಗ್ಲಾ ನೀಡಿದ 81 ರನ್ ಗಳ ಗುರಿ ಬೆನ್ನಟ್ಟಿದ ಭಾರತ ತಂಡ 11 ಓವರ್ ಗಳ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 83 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

ಬಾಂಗ್ಲಾ ಪರ ನಿಗರ್ ಸುಲ್ತಾನಾ 32 ರನ್ ಬಾರಿಸಿ ಔಟಾದರೆ ಶೋರ್ನಾ ಅಖ್ತೆರ್ ಅಜೇಯ 19 ರನ್ ಸಿಡಿಸಿದ್ದಾರೆ. ಈ ಇಬ್ಬರು ಆಟಗಾರರನ್ನು ಬಿಟ್ಟರೆ ಮತ್ಯಾರು ಎರಡಂಕಿ ದಾಟಲಿಲ್ಲ. ಭಾರತ ಪರ ಬೌಲಿಂಗ್ ನಲ್ಲಿ ರೇಣುಕಾ ಸಿಂಗ್ ಹಾಗೂ ರಾಧಾ ಯಾದವ್ ತಲಾ 3 ವಿಕೆಟ್ ಪಡೆದರೆ ಪೂಜಾ ವಸ್ತ್ರಾಕರ್ ಮತ್ತು ದೀಪ್ತಿ ಶರ್ಮಾ ತಲಾ 1 ವಿಕೆಟ್ ಪಡೆದಿದ್ದಾರೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ಅಜೇಯ 55 ಮತ್ತು ಶೆಫಾಲಿ ವರ್ಮಾ ಅಜೇಯ 26 ರನ್ ಬಾರಿಸಿ ತಂಡಕ್ಕೆ 10 ವಿಕೆಟ್ ಗಳಿಂದ ಅಮೋಘ ಗೆಲುವು ತಂದುಕೊಟ್ಟರು.

ಏಷ್ಯಾಕಪ್ ಟೂರ್ನಿಯಲ್ಲಿ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದ್ದು ಆ ಪಂದ್ಯದಲ್ಲಿ ಗೆದ್ದವರ ಜೊತೆ ಭಾರತ ಫೈನಲ್ ಪಂದ್ಯದಲ್ಲಿ ಸೆಣೆಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ

ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!