ಪಳ್ಳೆಕೆಲೆ: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲು 162 ರನ್ ಗಳ ಸವಾಲಿನ ಗುರಿ ನೀಡಿದೆ.
ಪಳ್ಳೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶ್ರೀಲಂಕಾ ತಂಡ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಗಳ ಸವಾಲಿನ ಮೊತ್ತ ಪೇರಿಸಿದೆ.
ಶ್ರೀಲಂಕಾ ಪರ ಆರಂಭಿಕರಾದ ಪಥುಂ ನಿಸಾಂಕಾ 32 ರನ್, ಕುಸಾಲ್ ಪೆರೆರಾ 53 ರನ್ ಮತ್ತು ಕಮಿಂಡು ಮೆಂಡಿಸ್ 26 ರನ್ ಗಳಿಸಿ ಲಂಕಾದ ಸವಾಲಿನ ಮೊತ್ತಕ್ಕೆ ಕಾರಣರಾದರು.
ಇನ್ನಿಂಗ್ಸ್ ಆರಂಭದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಶ್ರೀಲಂಕಾಗೆ ಮತ್ತೆ ಕೆಳ ಕ್ರಮಾಂಕದ ಬ್ಯಾಟರ್ ಗಳ ಕಳಪೆ ಪ್ರದರ್ಶನ ಬೃಹತ್ ಮೊತ್ತದ ಕನಸಿಗೆ ಮುಳುವಾಯಿತು. ಶನಕಾ ಮತ್ತು ಹಸರಂಗಾ ಶೂನ್ಯ ಸುತ್ತಿದರು.
ಇನ್ನು ಭಾರತದ ಪರ ರವಿ ಬಿಷ್ಣೋಯ್ 3 ವಿಕೆಟ್ ಪಡೆದರೆ, ಅರ್ಶ್ ದೀಪ್ ಸಿಂಗ್, ಅಕ್ಸರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯಾ ತಲಾ 2 ವಿಕೆಟ್ ಪಡೆದರು. ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಿಯಾನ್ ಪರಾಗ್ ಈ ಪಂದ್ಯದಲ್ಲಿ ವಿಕೆಟ್ ಪಡೆಯಲು ವಿಫಲರಾದರು.
ಅಂತಿಮವಾಗಿ ಶ್ರೀಲಂಕಾ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಭಾರತಕ್ಕೆ ಗೆಲ್ಲಲು 162 ರನ್ ಗಳ ಸವಾಲಿನ ಗುರಿ ನೀಡಿದೆ.