ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ  online desk
ಕ್ರಿಕೆಟ್

T20 World Cup 2024: ಬಾಂಗ್ಲಾ ವಿರುದ್ಧ ಭಾರತಕ್ಕೆ 60 ರನ್ ಜಯ!

ನ್ಯೂಯಾರ್ಕ್ ನಲ್ಲಿ ನಡೆದ T20 World Cup 2024 ನ ವಾರ್ಮ್ ಅಪ್ ಪಂದ್ಯದಲ್ಲಿ ಭಾರತ ಬಾಂಗ್ಲಾ ವಿರುದ್ಧ 60 ರನ್ ಗಳ ಜಯ ದಾಖಲಿಸಿದೆ.

ನ್ಯೂಯಾರ್ಕ್: ನ್ಯೂಯಾರ್ಕ್ ನಲ್ಲಿ ನಡೆದ T20 World Cup 2024 ನ ಅಭ್ಯಾಸ ಪಂದ್ಯದಲ್ಲಿ ಭಾರತ ಬಾಂಗ್ಲಾ ವಿರುದ್ಧ 60 ರನ್ ಗಳ ಜಯ ದಾಖಲಿಸಿದೆ.

ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ನಿಗದಿತ 20 ಓವರ್ ಗಳಲ್ಲಿ ಭಾರತ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು.

183 ರನ್ ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಬ್ಯಾಟಿಂಗ್ ವಿಭಾಗದಲ್ಲಿ ವೈಫಲ್ಯ ಎದುರಿಸಿತು. ಸೌಮ್ಯ ಸರ್ಕಾರ್ (2 ಎಸೆತಗಳಲ್ಲಿ 0 ರನ್) ತಾನ್ಜಿದ್ ಹಸನ್ (18 ಎಸೆತಗಳಲ್ಲಿ 17 ರನ್) ಸೇರಿ ಪ್ರಮುಖ ಬ್ಯಾಟ್ಸ್ ಮನ್ ಗಳು 2 ಅಂಕಿ ಸ್ಕೋರ್ ದಾಖಲಿಸಲು ಹೆಣಗಿದರು.

ಭಾರತದ ಪರ ಬ್ಯಾಟಿಂಗ್ ವಿಭಾಗದಲ್ಲಿ ರಿಷಭ್ ಪಂತ್ (32 ಎಸೆತಗಳಲ್ಲಿ 53 ರನ್) ಹಾರ್ದಿಕ್ ಪಾಂಡ್ಯ (23 ಎಸೆತಗಳಲ್ಲಿ 40 ರನ್) ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರೆ, ಬೌಲಿಂಗ್ ವಿಭಾಗದಲ್ಲಿ ಆರ್ಷ್ ದೀಪ್ ಸಿಂಗ್ 12 ರನ್ ಗಳನ್ನು ನೀಡಿ 2 ವಿಕೆಟ್ ಪಡೆದರು, ಶಿವಂ ದುಬೆ 11 ರನ್ ನೀಡಿ 2 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್