ಮುಂಬೈನ ಮೀರಾ ರೋಡ್ ನಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೈದಾನವೊಂದರಲ್ಲಿ ಬಾಕ್ಸ್ ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನಿಗೆ ಹೃದಯಾಘಾತವಾಗಿ ಕೆಳಗೆ ಬಿದ್ದಿದ್ದಾನೆ. ಇದೆಲ್ಲವೂ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಕುರಿತು ಕಾಶಿಗಾಂವ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಖಾಸಗಿ ಕಂಪನಿಯೊಂದು ಸ್ಪರ್ಧೆಯನ್ನು ಆಯೋಜಿಸಿತ್ತು. ಆ ಕಂಪನಿಯ ಯುವಕರು ಪರಸ್ಪರ ವಿರುದ್ಧ ಕ್ರಿಕೆಟ್ ಆಡುತ್ತಿದ್ದರು. ಆ ಸಮಯದಲ್ಲಿ ಬ್ಯಾಟರ್ ಚೆಂಡನ್ನು ಬಲವಾಗಿ ಹೊಡೆದಿದ್ದು ನಂತರ ಕೆಳಗೆ ಬೀಳುತ್ತಾನೆ. ಈ ವೇಳೆ ಪಕ್ಕದಲ್ಲಿದ್ದ ಇತರ ಆಟಗಾರರು ಏನಾಯಿತು ಎಂದು ಪರಿಶೀಲಿಸುತ್ತಾರೆ. ಅಲ್ಲದೆ ಕೂಡಲೇ ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು.
ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಮತ್ತೊಂದು ಸಾವಿನ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಾವು ಹೃದಯಾಘಾತದಿಂದ ಆಗಿಲ್ಲ. ಪುಣೆಯಲ್ಲಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 11 ವರ್ಷದ ಬಾಲಕನೊಬ್ಬನ ಗುಪ್ತಾಂಗಕ್ಕೆ ಚೆಂಡು ತಗುಲಿ ಸಾವನ್ನಪ್ಪಿದ್ದನು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು. ಚೆಂಡು ಬಿದ್ದ ರಭಸಕ್ಕೆ ಬಾಲಕ ಪ್ರಜ್ಞಾಹೀನನಾಗಿದ್ದನು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರಯೋಜನವಾಗಲಿಲ್ಲ.
2024ರ ಜನವರಿಯಲ್ಲೂ ಮುಂಬೈನ ಮಾಟುಂಗಾದಲ್ಲಿ ಕ್ರಿಕೆಟ್ ಪಂದ್ಯದ ವೇಳೆ 52 ವರ್ಷದ ಉದ್ಯಮಿಯೊಬ್ಬರು ತಲೆಗೆ ಚೆಂಡು ಬಡಿದು ಸಾವನ್ನಪ್ಪಿದ್ದರು.