ನ್ಯೂಯಾರ್ಕ್: ನ್ಯೂಯಾರ್ಕ್ ನಲ್ಲಿ ನಡೆದ T20 ವಿಶ್ವಕಪ್ ನ 4 ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಶ್ರೀಲಂಕಾ ತಂಡವನ್ನು 6 ವಿಕೆಟ್ ಗಳಿಂದ ಮಣಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ ತಂಡ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ, ಕೇವಲ 77 ರನ್ ಗಳಿಗೆ 16.2 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.
ಲಂಕಾ ಪರ ಬ್ಯಾಟ್ಸ್ ಮನ್ ಗಳು ದಕ್ಷಿಣ ಆಫ್ರಿಕಾ ಬೌಲರ್ ಗಳನ್ನು ಎದುರಿಸಲು ವಿಫಲರಾದರು. ಸುಲಭದ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 16.2 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 80 ರನ್ ಗಳಿ 6 ವಿಕೆಟ್ ಗಳ ಜಯ ಗಳಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ.
ಕ್ವಿಂಟನ್ ಡಿ ಕಾಕ್ 27 ಎಸೆತಗಳಲ್ಲಿ 20 ರನ್ ಗಳಿಸಿದರೆ, ಹೆನ್ರಿಕ್ ಕ್ಲಾಸೆನ್ (22 ಎಸೆತಗಳಲ್ಲಿ 19 ರನ್ ಗಳಿಸಿದರು) ಶ್ರೀಲಂಕಾ ಈ ಪಂದ್ಯದಲ್ಲಿ ಗಳಿಸಿರುವ ರನ್ T20 ಅಂತಾರಾಷ್ಟ್ರೀಯ ಆವೃತ್ತಿಯಲ್ಲೇ ತಂಡದ ಅತ್ಯಂತ ಕನಿಷ್ಠ ಸ್ಕೋರ್ ಆಗಿದೆ.
7 ರನ್ ಗಳನ್ನು ನೀಡಿ 4 ವಿಕೆಟ್ ಪಡೆಯುವ ಮೂಲಕ ದಕ್ಷಿಣ ಆಫ್ರಿಕಾದ ಅನ್ರಿಚ್ ನಾರ್ಟ್ಜೆ ತಮ್ಮ ವೃತ್ತಿ ಜೀವನದ ಅತ್ಯುತ್ತಮ ಸಾಧನೆ ಮಾಡಿದ್ದಾರೆ.