ವಿಂಡೀಸ್ ಗೆ ಭರ್ಜರಿ ಜಯ 
ಕ್ರಿಕೆಟ್

ICC T20 WC 2024; ಕೇವಲ 39 ರನ್​ಗೆ ಉಗಾಂಡ ಆಲೌಟ್, ವಿಂಡೀಸ್ ಗೆ 134 ರನ್ ಭರ್ಜರಿ ಜಯ!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕ್ರಿಕೆಟ್ ಶಿಶು ಉಗಾಂಡ ಹೀನಾಯ ದಾಖಲೆ ಬರೆದಿದ್ದು, ವಿಂಡೀಸ್ ವಿರುದ್ಧ ಕೇವಲ 39ರನ್ ಗಳಿಗೆ ಆಲೌಟ್ ಆಗಿ, 134 ರನ್ ಗಳ ಹೀನಾಯ ಸೋಲು ಕಂಡಿದೆ.

ಗಯಾನಾ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕ್ರಿಕೆಟ್ ಶಿಶು ಉಗಾಂಡ ಹೀನಾಯ ದಾಖಲೆ ಬರೆದಿದ್ದು, ವಿಂಡೀಸ್ ವಿರುದ್ಧ ಕೇವಲ 39ರನ್ ಗಳಿಗೆ ಆಲೌಟ್ ಆಗಿ, 134 ರನ್ ಗಳ ಹೀನಾಯ ಸೋಲು ಕಂಡಿದೆ.

ಹೌದು.. ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಿಂಡೀಸ್ ನೀಡಿದ 174ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಉಗಾಂಡ ಕೇವಲ 39ರನ್ ಗಳಿಗೆ ಆಲೌಟ್ ಆಗಿದೆ. ತಂಡದ ಪರ ಕೆಳ ಕ್ರಮಾಂಕದ ಜುಮಾ ಮಿಯಾಗಿ (ಅಜೇಯ 13) ಅವರನ್ನು ಹೊರತುಪಡಿಸಿ ತಂಡದ ಉಳಿದಾವ ಆಟಗಾರರೂ ಎರಡಂಕಿ ಮೊತ್ತ ದಾಟಿಲ್ಲ.

12 ಓವರ್ ನಲ್ಲೇ ಉಗಾಂಡ 39 ರನ್ ಗಳಿಗೇ ಆಲೌಟ್ ಆಯಿತು. ವಿಂಡೀಸ್ ಪರ ಅಕೀಲ್ ಹೊಸೇನ್ 5 ವಿಕೆಟ್ ಪಡೆದು ಉಗಾಂಡ ಪತನಕ್ಕೆ ಕಾರಣರಾದರು. ಅಲ್ಜಾರಿ ಜೋಸೆಫ್ 2 ವಿಕೆಟ್ ಮತ್ತು ರೊಮಾರಿಯೋ ಶೆಫರ್ಡ್, ಆ್ಯಂಡ್ರೆ ರಸೆಲ್ ಮತ್ತು ಮೊಟಿ ತಲಾ ಒಂದು ವಿಕೆಟ್ ಪಡೆದರು.

ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ 2ನೇ ತಂಡ

ಉಗಾಂಡ ತಂಡವು ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ದಾಖಲೆ ಬರೆದಿದ್ದು, ವೆಸ್ಟ್ ಇಂಡೀಸ್ ವಿರುದ್ಧ ಕೇವಲ 39 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ 2ನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ 2014ರಲ್ಲಿ ನೆದರ್​ಲ್ಯಾಂಡ್ಸ್ ತಂಡವು 39 ರನ್​ಗಳಿಗೆ ಆಲೌಟ್ ಆಗಿತ್ತು. ಇದೀಗ ಉಗಾಂಡ ಈ ಕಳಪೆ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

ಭರ್ಜರಿ ಬ್ಯಾಟಿಂಗ್ ಮಾಡಿದ ವಿಂಡೀಸ್

ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್​ಮನ್ ಪೊವೆಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿಂಡೀಸ್ ಪರ ಆರಂಭಿಕ ಆಟಗಾರ ಜಾನ್ಸನ್ ಚಾರ್ಲ್ಸ್ 44 ರನ್ ಬಾರಿಸಿ ಮಿಂಚಿದ್ದರು. ಆ ಬಳಿಕ ಬಂದ ನಿಕೋಲಸ್ ಪೂರನ್ 17 ಎಸೆತಗಳಲ್ಲಿ 22 ರನ್ ಬಾರಿಸಿದರೆ, ರೋವ್​ಮನ್ ಪೊವೆಲ್ 23 ರನ್​ಗಳ ಕೊಡುಗೆ ನೀಡಿದರು.

ಇನ್ನು ಎಡಗೈ ದಾಂಡಿಗ ಶೆರ್ಫೆನ್ ರುದರ್​ಫೋರ್ಡ್ 22 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರ ನಡುವೆ ಅಂತಿಮ ಓವರ್​ಗಳ ವೇಳೆ ಕಣಕ್ಕಿಳಿದ ಆ್ಯಂಡ್ರೆ ರಸೆಲ್ 17 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 30 ರನ್ ಸಿಡಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT