ಭಾರತ ತಂಡ 
ಕ್ರಿಕೆಟ್

T20 World Cup: ಅಮೆರಿಕ ವಿರುದ್ಧ ಭಾರತಕ್ಕೆ 7 ವಿಕೆಟ್‌ ಜಯ, ಟೀಂ ಇಂಡಿಯಾ ಸೂಪರ್‌-8ಕ್ಕೆ ಲಗ್ಗೆ

2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬುಧವಾರ ಅಮೆರಿಕ ವಿರುದ್ಧ ಭಾರತ 7 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದೆ.

ನ್ಯೂಯಾರ್ಕ್‌: 2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬುಧವಾರ ಅಮೆರಿಕ ವಿರುದ್ಧ ಭಾರತ 7 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದ್ದು, ಈ ಮೂಲಕ ಸೂಪರ್ - 8 ಹಂತಕ್ಕೆ ಅರ್ಹತೆ ಪಡೆದಿದೆ.

ಇಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ ತಂಡ, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 110 ರನ್ ಗಳಿಸಿತು.

ಗೆಲುವಿಗೆ 111 ರನ್ ಗಳ ಗುರಿ ಬೆನ್ನಟ್ಟಿದ ಭಾರತ, ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಅವರ ಅದ್ಭುತ ಜೊತೆಯಾಟದ ನೆರವಿನಿಂದ 18.2 ಓವರ್​ಗಳಲ್ಲಿ ಮೂರು ವಿಕೆಟ್​ಗೆ 111 ರನ್ ಗಳಿಸಿ ಜಯಭೇರಿ ಬಾರಿಸಿತು.

ಈ ಪಂದ್ಯಾವಳಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಮೂರನ್ನೂ ಗೆಲ್ಲುವ ಮೂಲಕ ಭಾರತ 6 ಅಂಕಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಅಮೆರಿಕ ತಂಡ ಎರಡನೇ ಸ್ಥಾನದಲ್ಲೇ ಉಳಿದಿದೆ.

ಭಾರತದ ಪರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ಉತ್ತಮ ಆರಂಭ ನೀಡಲು ವಿಫಲರಾದರು. ವಿರಾಟ್ ಕೊಹ್ಲಿ ಡಕ್‌ ಔಟಾದರೆ, ನಾಯಕ ರೋಹಿತ್ ಶರ್ಮಾ ಕೇವಲ 3 ರನ್‌ಗಳಿಗೆ ಔಟಾದರು. ನಂತರ ಬಂದ ರಿಷಭ್ ಪಂತ್ 20 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 18 ರನ್ ಗಳಿಸಿ ಬೌಲ್ಡ್ ಆದರು. ಆಗ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಜೋಡಿ ನಾಲ್ಕನೇ ವಿಕೆಟ್‌ಗೆ 72 ರನ್‌ಗಳ ಜೊತೆಯಾಟವಾಡಿತು ಮತ್ತು ಸಂಕಷ್ಟದಲ್ಲಿದ್ದ ಭಾರತ ತಂಡವನ್ನು ಗೆಲುವಿನ ಕಡೆಗೆ ಮುನ್ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ