ಬಾಂಗ್ಲಾದೇಶ ಆಟಗಾರರ ಸಂಭ್ರಮ 
ಕ್ರಿಕೆಟ್

T20 World Cup: ನೆದರ್ಲೆಂಡ್ಸ್ ವಿರುದ್ಧ ಬಾಂಗ್ಲಾದೇಶಕ್ಕೆ 25 ರನ್ ಜಯ

ಕಿಂಗ್‌ಸ್ಟೌನ್‌ನ ಸೇಂಟ್ ವಿನ್ಸೆಂಟ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಡ ಶಕಿಬ್ ಅಲ್ ಹಸನ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್‌ ನಷ್ಟಕ್ಕೆ 159 ರನ್ ಗಳಿಸಿತು.

ಕಿಂಗ್‌ಸ್ಟೌನ್‌: 2024ರ ಐಸಿಸಿ ಟಿ20 ವಿಶ್ವಕಪ್‌ ಪಂದ್ಯಾವಳಿಯ ಡಿ ಗುಂಪಿನ ಪಂದ್ಯದಲ್ಲಿ ಗುರುವಾರ ನೆದರ್ಲೆಂಡ್ಸ್ ವಿರುದ್ಧ ಬಾಂಗ್ಲಾದೇಶ 25 ರನ್ ಗಳಿಂದ ಗೆಲುವು ಸಾಧಿಸಿದೆ.

ಇಂದು ಕಿಂಗ್‌ಸ್ಟೌನ್‌ನ ಸೇಂಟ್ ವಿನ್ಸೆಂಟ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಡ ಶಕಿಬ್ ಅಲ್ ಹಸನ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್‌ ನಷ್ಟಕ್ಕೆ 159 ರನ್ ಗಳಿಸಿತು.

ಗೆಲುವಿಗೆ 160 ರನ್ ಗಳ ಗುರಿ ಬೆನ್ನಟ್ಟಿದ ನೆದರ್ಲೆಂಡ್ಸ್, ಮಧ್ಯಮ ಕ್ರಮಾಂಕದ ಉತ್ತಮ ಪ್ರದರ್ಶನದ ಹೊರತಾಗಿಯೂ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್ ಮಾತ್ರ ಗಳಿಸಿ 25 ರನ್‌ಗಳಿಂದ ಸೋಲು ಅನುಭವಿಸಿತು.

ಬಾಂಗ್ಲಾ ಪರ ಶಕಿಬ್ ಅಲ್ ಹಸನ್ ಅವರು 45 ಎಸೆತಗಳಲ್ಲಿ ಅಜೆಯ 64 ರನ್ ಗಳಿಸಿದರು. ತನ್ಜಿದ್ ಹಸನ್ 35, ಮಹಮುದುಲ್ಲಾ 25 ಹಾಗೂ ಜೇಕರ್ ಅಲಿ 14 ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು.

ಬೌಲಿಂಗ್‌ನಲ್ಲಿ ಬಾಂಗ್ಲಾದೇಶ ತಂಡದ ಪರ ರಿಷಾದ್ ಹೊಸೈನ್ 4 ಓವರ್‌ಗಳಲ್ಲಿ 33 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ತಸ್ಕಿನ್ ಅಹ್ಮದ್ 4 ಓವರ್‌ಗಳಲ್ಲಿ 30 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಮುಸ್ತಾಫಿಜುರ್ ರಹಮಾನ್, ತಂಝೀಮ್ ಹಸನ್ ಶಕಿಬ್ ಮತ್ತು ಮಹಮದುಲ್ಲಾ ತಲಾ ಒಂದೊಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL

ಮಹಿಳೆ ಫೋಟೋ ಮಾರ್ಫ್ ಮಾಡಿ ಪ್ರಧಾನಿ ಮೋದಿ ಫೋಟೋದೊಂದಿಗೆ ಪ್ರದರ್ಶನ: CJP ವಿರುದ್ಧ FIR ದಾಖಲು

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ