ನ್ಯೂಯಾರ್ಕ್ ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಮಾಡ್ಯುಲರ್ ಕ್ರಿಕೆಟ್ ಸ್ಟೇಡಿಯಂ 
ಕ್ರಿಕೆಟ್

T20 World Cup 2024: ಭಾರತ- ಪಾಕಿಸ್ತಾನ ಪಂದ್ಯ ನಡೆದ ನ್ಯೂಯಾರ್ಕ್ ಕ್ರೀಡಾಂಗಣ ನೆಲಸಮ! ಇಲ್ಲಿದೆ Video

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆಯಾಗಿದ್ದ ನ್ಯೂಯಾರ್ಕ್ ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಮಾಡ್ಯುಲರ್ ಕ್ರಿಕೆಟ್ ಸ್ಟೇಡಿಯಂ ಅನ್ನು ನೆಲಸಮಗೊಳಿಸಲಾಗುತ್ತಿದೆ.

ನ್ಯೂಯಾರ್ಕ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆಯಾಗಿದ್ದ ನ್ಯೂಯಾರ್ಕ್ ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಮಾಡ್ಯುಲರ್ ಕ್ರಿಕೆಟ್ ಸ್ಟೇಡಿಯಂ ಅನ್ನು ನೆಲಸಮಗೊಳಿಸಲಾಗುತ್ತಿದೆ.

ಹೌದು.. ಐಸಿಸಿ ಟಿ20 ವಿಶ್ವಕಪ್ ಟೂರ್ನಿಗಾಗಿಯೇ ಬರೊಬ್ಬರಿ 30 ಮಿಲಿಯನ್ ಡಾಲರ್ ಅಂದರೆ ಸುಮಾರು 250 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಮಾಡ್ಯುಲರ್ ಕ್ರೀಡಾಂಗಣವನ್ನು ಇದೀಗ ಸಂಪೂರ್ಣವಾಗಿ ನೆಲಸಮ ಮಾಡಲಾಗುತ್ತಿದೆ. ಕೇವಲ 8 ಟಿ20 ವಿಶ್ವಕಪ್​ ಪಂದ್ಯಗಳಿಗೆ ಬಳಕೆಯಾಗಿದ್ದ ಈ ಮೈದಾನವನ್ನು ಇದೀಗ ಕೆಡವಲಾಗುತ್ತಿದ್ದು, ಈಗಾಗಲೇ ಹತ್ತಾರು ಬುಲ್ಡೋಜರ್ ಗಳು ಮೈದಾನಕ್ಕೆ ಆಗಮಿಸಿ ಮೈದಾನ ಕೆಡವಲು ಮುಂದಾಗಿವೆ.

ಕೇವಲ 106 ದಿನಗಳಲ್ಲಿ ನಿರ್ಮಾಣ

9ನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆತಿಥ್ಯವಹಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅದರಲ್ಲೂ ಕ್ರಿಕೆಟ್​ಗೆ ಹೆಚ್ಚು ಆಸಕ್ತಿ ತೋರದ ಅಮೆರಿಕದಲ್ಲಿ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಯೋಜಿಸಲಾಗುತ್ತಿದೆ.

ಈ ಕಾರಣದಿಂದಾಗಿ ನ್ಯೂಯಾರ್ಕ್‌ನಲ್ಲಿ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಮಾಡ್ಯುಲರ್ ಕ್ರಿಕೆಟ್ ಸ್ಟೇಡಿಯಂ ಅನ್ನು ನಿರ್ಮಿಸಲಾಗಿತ್ತು. ಬರೋಬ್ಬರಿ 30 ಮಿಲಿಯನ್ ಡಾಲರ್ ಅಂದರೆ ಸುಮಾರು 250 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮಾಡ್ಯುಲರ್ ಕ್ರೀಡಾಂಗಣವನ್ನು ಕೇವಲ 106 ದಿನಗಳಲ್ಲಿ ಕಟ್ಟಲಾಗಿತ್ತು. ಆದರೆ, ಕೇವಲ 8 ಟಿ20 ವಿಶ್ವಕಪ್​ ಪಂದ್ಯಗಳಿಗೆ ಬಳಕೆಯಾಗಿದ್ದ ಈ ಮೈದಾನವನ್ನು ಇದೀಗ ಕೆಡವಲಾಗುತ್ತಿದೆ.

34,000 ಆಸನಗಳ ಮಾಡ್ಯುಲರ್ ಸ್ಟೇಡಿಯಂ

ಅಮೆರಿಕದಲ್ಲಿ ಟಿ20 ವಿಶ್ವಕಪ್ ಆಯೋಜಿಸುವ ಇರಾದೆಯಲ್ಲಿದ್ದ ಐಸಿಸಿ, ಈ ವರ್ಷದ ಜನವರಿಯಲ್ಲಿ ನ್ಯೂಯಾರ್ಕ್‌ನಲ್ಲಿ 34,000 ಆಸನಗಳ ಮಾಡ್ಯುಲರ್ ಸ್ಟೇಡಿಯಂ ನಿರ್ಮಾಣವನ್ನು ಕೈಗೆತ್ತಿಕೊಂಡಿತ್ತು. ಅದರಂತೆ ಕೇವಲ 106 ದಿನಗಳಲ್ಲಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂ ಹೆಸರಿನಲ್ಲಿ ನೂತನ ತಂತ್ರಜ್ಞಾನದ ಸುಸಜ್ಜೀತ ಕ್ರೀಡಾಂಗಣವನ್ನು ನಿರ್ಮಿಸಿಲಾಗಿತ್ತು.

ಈ ಮಾಡ್ಯುಲರ್ ಸ್ಟೇಡಿಯಂನ ವಿಶೇಷತೆಯೆಂದರೆ ಈ ಮೈದಾನ ಅದರ ಪಿಚ್, ಸ್ಟ್ಯಾಂಡ್ ಇತ್ಯಾದಿಗಳನ್ನು ಈ ಪಂದ್ಯಾವಳಿಗಾಗಿಯೇ ನಿರ್ಮಿಸಲಾಗಿತ್ತು. ಹಾಗಾಗಿ ಈ ಮಾಡ್ಯುಲರ್ ಕ್ರೀಡಾಂಗಣದ ನಿರ್ಮಾಣದಲ್ಲಿ ಅಲ್ಯೂಮಿನಿಯಂ ಮತ್ತು ಉಕ್ಕನ್ನು ಬಳಕೆ ಮಾಡಲಾಗಿತ್ತು. ಸಮಯದ ಕೊರತೆ ಮತ್ತು ಪರಿಸರ ಸುಸ್ಥಿರತೆ ಎರಡು ಪ್ರಮುಖ ಕಾರಣಗಳಿಂದ ಈ ಮಾಡ್ಯುಲರ್ ಕ್ರೀಡಾಂಗಣಗಳನ್ನು ನಿರ್ಮಿಸಲಾಗಿತ್ತು. ಏಕೆಂದರೆ ಟಿ20 ವಿಶ್ವಕಪ್ ಹೊರತುಪಡಿಸಿ ಅಮೆರಿಕದಲ್ಲಿ ಉಳಿದಂತೆ ಕ್ರಿಕೆಟ್ ಪಂದ್ಯಾವಳಿಗಳು ನಡೆಯುವುದು ತೀರ ಕಡಿಮೆ.

ಇದೀಗ ಈ ಕ್ರೀಡಾಂಗಣದಲ್ಲಿ ವೇಳಾಪಟ್ಟಿಯಂತೆ 8 ಪಂದ್ಯಗಳನ್ನು ಆಡಿ ಮುಗಿಸಲಾಗಿದ್ದು, ಈ ಕ್ರೀಡಾಂಗಣ ನಿರ್ಮಾಣದ ಹಿಂದಿದ್ದ ಉದ್ದೇಶದಂತೆ ಇದೀಗ ಈ ಕ್ರೀಡಾಂಗಣವನ್ನು ನೆಲಸಮಗೊಳಿಸಿ, ಮತ್ತೆ ಈ ಜಾಗವನ್ನು ತನ್ನ ಹಳೆಯ ಸ್ವರೂಪಕ್ಕೆ ತರಲಾಗುತ್ತಿದೆ.

ಪಿಚ್ ಉಳಿಸಿಕೊಳ್ಳಲು ಐಸಿಸಿ ಮನಸು!

106 ದಿನಗಳಲ್ಲಿ ನಿರ್ಮಾಣಗೊಂಡಿದ್ದ ಈ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಇದೀಗ 6 ವಾರಗಳಲ್ಲಿ ನೆಲಸಮಗೊಳ್ಳಲಿದೆ. ಈ ಕ್ರೀಡಾಂಗಣದ ಪಿಚ್‌ಗಳಿಗೆ ಸಂಬಂಧಿಸಿದಂತೆ, ನಸ್ಸೌ ಕೌಂಟಿ ಅಧಿಕಾರಿಗಳು ಅವುಗಳನ್ನು ಇರಿಸಿಕೊಳ್ಳಲು ಬಯಸಿದರೆ, ಅವರು ಈ ಪಿಚ್​ಗಳನ್ನು ಅಲ್ಲೆ ಉಳಿಸಿಕೊಳ್ಳಬಹುದು ಎಂದು ಐಸಿಸಿ ಅಧಿಕಾರಿಗಳು ಹೇಳಿದ್ದಾರೆ. ಒಂದು ವೇಳೆ ಈ ಪಿಚ್​ಗಳು ಅವರಿಗೆ ಬೇಡವೆಂದರೆ ನಾವು ಈ ಪಿಚ್‌ಗಳನ್ನು ಬೇರೆಡೆಗೆ ಸ್ಥಳಾಂತರಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT