ಪಾಕ್ ಆಟಗಾರರು 
ಕ್ರಿಕೆಟ್

T20 World Cup: ಯುಎಸ್ v/s ಐರ್ಲೆಂಡ್ ಪಂದ್ಯ ಮಳೆಯಿಂದ ರದ್ದು, ಟೂರ್ನಿಯಿಂದ ಹೊರಬಿದ್ದ ಪಾಕಿಸ್ತಾನ

ಅಮೆರಿಕದ ಲೌಡರ್‌ಹಿಲ್‌ನಲ್ಲಿ ಶುಕ್ರವಾರ ನಡೆಯಬೇಕಾಗಿದ್ದ ಯುಎಸ್‌ಎ ಹಾಗೂ ಐರ್ಲೆಂಡ್‌ ನಡುವಿನ ಟಿ-20 ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯ ಮಳೆಯಿಂದಾಗಿ ರದ್ದಾಯಿತು.

ಪ್ಲೋರಿಡಾ: ಅಮೆರಿಕದ ಲೌಡರ್‌ಹಿಲ್‌ನಲ್ಲಿ ಶುಕ್ರವಾರ ನಡೆಯಬೇಕಾಗಿದ್ದ ಯುಎಸ್‌ಎ ಹಾಗೂ ಐರ್ಲೆಂಡ್‌ ನಡುವಿನ ಟಿ-20 ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಇದರಿಂದಾಗಿ ಎರಡೂ ತಂಡಗಳು ತಲಾ ಒಂದು ಪಾಯಿಂಟ್‌ ಸಂಪಾದಿಸಿದವು. ಇದರೊಂದಿಗೆ ಒಟ್ಟು 5 ಅಂಕ ಗಳಿಸಿದ ಅಮೆರಿಕ ತಂಡವು ಸೂಪರ್‌ 8ಕ್ಕೆ ಲಗ್ಗೆ ಇಟ್ಟಿತು.

ಕಳೆದ ಬಾರಿ ರನ್ನರ್ ಅಪ್ ಪಾಕಿಸ್ತಾನ ಈ ಬಾರಿ ಲೀಗ್ ಹಂತದಲ್ಲೇ ಹೊರಬಿದ್ದಿದ್ದು, ಭಾರಿ ಮುಖಭಂಗ ಅನುಭವಿಸಿದೆ.ಮೊದಲ ಬಾರಿಗೆ ಟಿ-20 ವಿಶ್ವಕಪ್‌ನಲ್ಲಿ ಆಡುತ್ತಿರುವ ಅಮೆರಿಕ ತಂಡವು ಮೊದಲ ಪ್ರಯತ್ನದಲ್ಲಿಯೇ ಸೂಪರ್‌ 8 ಪ್ರವೇಶಿಸಿದೆ.

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನ ಅಮೆರಿಕ ಹಾಗೂ ಭಾರತದ ವಿರುದ್ಧ ಸೋತಿತ್ತು. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿತ್ತು. ಆದರೆ, ಶುಕ್ರವಾರ ನಡೆಯಬೇಕಿದ್ದ ಯುಎಸ್‌ಎ- ಐರ್ಲೆಂಡ್‌ ನಡುವಿನ ಪಂದ್ಯ ಮಳೆಯಿಂದ ರದ್ದಾಗಿದ್ದು, ಎರಡೂ ತಂಡಗಳಿಗೂ ತಲಾ ಒಂದೊಂದು ಅಂಕ ಹಂಚಿಕೆ ಮಾಡಲಾಗಿದೆ. ಈ ಮೂಲಕ 5 ಅಂಕಗಳನ್ನು ಪಡೆದ ಯುಎಸ್‌ಎ ಎ ಗುಂಪಿನಲ್ಲಿ ಎರಡನೇ ತಂಡವಾಗಿ ಸೂಪರ್ 8 ಪ್ರವೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT