ಕೇನ್ ವಿಲಿಯಮ್ಸನ್ 
ಕ್ರಿಕೆಟ್

ICC T20 WorldCup 2024 ಕಳಪೆ ಪ್ರದರ್ಶನ: ನ್ಯೂಜಿಲೆಂಡ್ ನಾಯಕ ಸ್ಥಾನಕ್ಕೆ Kane Williamson ರಾಜಿನಾಮೆ

ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನದ ಮೂಲಕ ಟೂರ್ನಿಯಿಂದಲೇ ನ್ಯೂಜಿಲೆಂಡ್ ತಂಡ ಹೊರಬಿದ್ದಿರುವ ಹಿನ್ನಲೆಯಲ್ಲಿ ತಂಡದ ನಾಯಕ ಕೇನ್ ವಿಲಿಯಮ್ಸನ್ ತಂಡದ ನಾಯಕತ್ವ ತೊರೆದಿದ್ದಾರೆ.

ನವದೆಹಲಿ: ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನದ ಮೂಲಕ ಟೂರ್ನಿಯಿಂದಲೇ ನ್ಯೂಜಿಲೆಂಡ್ ತಂಡ ಹೊರಬಿದ್ದಿರುವ ಹಿನ್ನಲೆಯಲ್ಲಿ ತಂಡದ ನಾಯಕ ಕೇನ್ ವಿಲಿಯಮ್ಸನ್ ತಂಡದ ನಾಯಕತ್ವ ತೊರೆದಿದ್ದಾರೆ.

ಹೌದು.. ಈ ಬಾರಿ ಟಿ20 ವಿಶ್ವಕಪ್ ನಲ್ಲಿ ತಂಡದ ಕಳಪೆ ಪ್ರದರ್ಶನದಿಂದ ಬೇಸತ್ತ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ನಾಯಕತ್ವ ತೊರೆದಿರುವುದು ಮಾತ್ರವಲ್ಲ ನ್ಯೂಜಿಲೆಂಡ್ ತಂಡದ ಸೆಟ್ರಲ್ ಕಾಂಟ್ರಾಕ್ಟ್ ಅನ್ನೂ ನಿರಾಕರಿಸಿದ್ದಾರೆ.

ಮೂಲಗಳ ಪ್ರಕಾರ ಕೇನ್ ವಿಲಿಯಮ್ಸನ್ ಕೇವಲ ಟಿ20 ಮಾತ್ರವಲ್ಲ, ಏಕದಿನ ತಂಡದ ನಾಯಕತ್ವಕ್ಕೂ ರಾಜೀನಾಮೆ ನೀಡಿದ್ದು ಇದು ತಂಡದ ಆಘಾತಕ್ಕೆ ಕಾರಣವಾಗಿದೆ. ನ್ಯೂಜಿಲೆಂಡ್ ಕಂಡ ಅತ್ಯಂತ ಯಶಸ್ವೀ ನಾಯಕರಲ್ಲಿ ಒಬ್ಬರಾಗಿದ್ದ ಕೇನ್ ವಿಲಿಯಮ್ಸನ್ ಇದೀಗ ತಂಡದ ಕಳಪೆ ಪ್ರದರ್ಶನದಿಂದ ಬೇಸರಗೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಸೆಂಟ್ರಲ್ ಕಾಂಟ್ರಾಕ್ಟ್ ಗೂ ನಿರಾಕರಣೆ!

ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ಲೀಗ್ ಹಂತದಲ್ಲೇ ಹೊರಬಿದ್ದಿದೆ. ಹೀಗಾಗಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ಅಲ್ಲದೆ, 2024-25 ರ ಋತುವಿನ ಮಂಡಳಿಯ ಕೇಂದ್ರೀಯ ಗುತ್ತಿಗೆ ಒಪ್ಪಂದವನ್ನೂ ನಿರಾಕರಿಸಿದ್ದಾರೆ.

ನಾಯಕತ್ವ ತ್ಯಜಿಸಿದರೂ ಆಟಗಾರನಾಗಿ ಮುಂದುವರಿಕೆ

ಇದೇ ವೇಳೆ ತಾವು ನಾಯಕತ್ವಕ್ಕೆ ಮಾತ್ರ ರಾಜಿನಾಮೆ ನೀಡಿದ್ದು ಓರ್ವ ಬ್ಯಾಟರ್ ಆಗಿ ಮತ್ತು ಆಟಗಾರನಾಗಿ ತಂಡದಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ. ಇದೇ ವಿಚಾರವಾಗಿ ಕೇವಲ ಬ್ಯಾಟರ್ ನನ್ನ ವೃತ್ತಿ ಜೀವನವನ್ನು ಮುಂದುವರಿಸಲು ಬಯಸುವುದಾಗಿ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಗೆ ಅವರು ತಿಳಿಸಿದ್ದಾರೆ. ಆದರೆ ಟೆಸ್ಟ್ ಕ್ರಿಕೆಟ್ ನಾಯಕತ್ವದ ಬಗ್ಗೆ ಅವರು ಇದುವರೆಗೆ ಏನೂ ಹೇಳಿಲ್ಲ.

ಅಂದಹಾಗೆ ನ್ಯೂಜಿಲೆಂಡ್ ತಂಡವನ್ನು 91 ಏಕದಿನ ಪಂದ್ಯಗಳಲ್ಲಿ ಕೇನ್ ವಿಲಿಯಮ್ಸನ್ ಮುನ್ನಡೆಸಿದ್ದು ಈ ಪೈಕಿ ತಂಡ 46 ಪಂದ್ಯಗಳಲ್ಲಿ ಗೆಲುವು, 40 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇನ್ನು ಟಿ20 ಕ್ರಿಕೆಟ್ ನಲ್ಲಿ 75 ಪಂದ್ಯಗಳಿಗೆ ನಾಯಕರಾಗಿದ್ದು 39 ಗೆಲುವು, 34 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT