ತಂಡದ ಆಟಗಾರರಲ್ಲಿ ಸಂಭ್ರಮ  
ಕ್ರಿಕೆಟ್

T20 World Cup 2024 semi-final 1: ಆಫ್ಘಾನಿಸ್ತಾನ ಮಣಿಸಿ ಫೈನಲ್ ಪ್ರವೇಶಿಸಿದ ಸೌತ್ ಆಫ್ರಿಕಾ, ಐತಿಹಾಸಿಕ ಗೆಲುವು

ಈ ಹಿಂದೆ ಟಿ20 ವಿಶ್ವಕಪ್​ ಗಳಲ್ಲಿ ದಕ್ಷಿಣ ಆಫ್ರಿಕಾ ಅಂತಿಮ ಸೆಮಿಸ್‌ ಪಂದ್ಯಗಳಲ್ಲಿ ಏಳು ಬಾರಿ ಸೋತ ನಂತರ ತಮ್ಮ ಮೊದಲ ವಿಶ್ವಕಪ್ ಫೈನಲ್‌ಗೆ ಈ ಬಾರಿ ಪ್ರವೇಶಿಸಿದ್ದಾರೆ.

T20 World Cup 2024: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ 1 ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ 9 ವಿಕೆಟ್ ಗಳಿಂದ ಗೆಲುವು ಸಾಧಿಸಿ ದಕ್ಷಿಣ ಆಫ್ರಿಕಾ ತಂಡ ಫೈನಲ್​ಗೆ ಪ್ರವೇಶಿಸಿದೆ. ಐಸಿಸಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದು ಸೌತ್ ಆಫ್ರಿಕಾ ತಂಡದ ಮೊದಲ ಸೆಮಿಫೈನಲ್ ಗೆಲುವಾಗಿದೆ. 1992 ರಿಂದ ವಿಶ್ವಕಪ್​ ನಲ್ಲಿ ಆಫ್ರಿಕನ್ನರು ಒಮ್ಮೆಯೂ ಫೈನಲ್ ಪ್ರವೇಶಿಸಿರಲಿಲ್ಲ.

ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಮೊದಲ ಓವರ್​ನಿಂದಲೇ ಸಂಘಟಿತವಾಗಿ ದಕ್ಷಿಣ ಆಫ್ರಿಕಾ ತಂಡದ ಬೌಲರ್​ಗಳು ಆರಂಭದಲ್ಲಿಯೇ ಮುನ್ನಡೆ ಸಾಧಿಸುತ್ತಾ ಹೋದರು.

ಮೊದಲ ಬಾರಿಗೆ ಫೈನಲ್ ಪ್ರವೇಶ: ದಕ್ಷಿಣ ಆಫ್ರಿಕಾ 67 ಎಸೆತಗಳು ಬಾಕಿ ಇರುವಂತೆಯೇ ಒಂಬತ್ತು ವಿಕೆಟ್‌ಗಳ ಜಯ ಸಾಧಿಸಿತು. ಹೆಂಡ್ರಿಕ್ಸ್ 25 ಎಸೆತಗಳಲ್ಲಿ 29 ರನ್ ಸಿಡಿಸಿದರೆ, ಮಾರ್ಕ್ರಾಮ್ 21 ಎಸೆತಗಳಲ್ಲಿ 23 ರನ್ ಗಳಿಸಿದರು, ಈ ಹಿಂದೆ ದಕ್ಷಿಣ ಆಫ್ರಿಕಾ ಅಂತಿಮ ಸೆಮಿಸ್‌ ಪಂದ್ಯಗಳಲ್ಲಿ ಏಳು ಬಾರಿ ಸೋತಿತ್ತು. ಇದೇ ಮೊದಲ ಬಾರಿಗೆ ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಮಾರ್ಕೊ ಯಾನ್ಸೆನ್ ಮೊದಲ ಓವರ್​ನಲ್ಲೇ ರಹಮಾನುಲ್ಲಾ ಗುರ್ಬಾಝ್ (0) ವಿಕೆಟ್ ಪಡೆದರೆ, ಆ ಬಳಿಕ ಬಂದ ಗುಲ್ಬದ್ದಿನ್ ನೈಬ್ (9) ಕ್ಲೀನ್ ಬೌಲ್ಡ್ ಆದರು. ಇಬ್ರಾಹಿಂ ಝದ್ರಾನ್ (2) ರಬಾಡ ಎಸೆತದಲ್ಲಿ ವಿಕೆಟ್ ಕೈಚೆಲ್ಲಿದರು.

ಅಝ್ಮತುಲ್ಲಾ ಒಮರ್​ಝಾಹಿ 10 ರನ್​ಗಳಿಸಿದರೂ ಅನ್ರಿಕ್ ನೋಕಿಯಾ ಎಸೆತದಲ್ಲಿ ಔಟಾದರು. ಅನುಭವಿ ಬ್ಯಾಟರ್ ಮೊಹಮ್ಮದ್ ನಬಿ ಸೊನ್ನೆ ಸುತ್ತಿದರೆ, ನಂಗೆಯಾಲಿಯಾ ಖರೋಟೆ 2 ರನ್ ​ಗಳಿಸಿ ಔಟಾದರು. ಪರಿಣಾಮ 23 ರನ್​ ಕಲೆಹಾಕುವಷ್ಟರಲ್ಲಿ ಅಫ್ಘಾನಿಸ್ತಾನ್ ತಂಡವು 5 ವಿಕೆಟ್ ಕಳೆದುಕೊಂಡಿತು.

ಆ ಬಳಿಕ ಬಂದ ಕರೀಮ್ ಜನ್ನತ್ (8) ಮತ್ತು ರಶೀದ್ ಖಾನ್ (8) ಅಲ್ಪ ಹೊತ್ತು ಕ್ರೀಸ್​ನಲ್ಲಿದ್ದರು. ಇವರಿಬ್ಬರ ಪತನದೊಂದಿಗೆ ಪೆವಿಲಿಯನ್ ಪರೇಡ್ ಮುಂದುವರೆಸಿದ ಅಫ್ಘಾನಿಸ್ತಾನ್ ತಂಡ 11.5 ಓವರ್​ಗಳಲ್ಲಿ 56 ರನ್​ಗಳಿಸಿ ಆಲೌಟ್ ಆಯಿತು.

ಸೌತ್ ಆಫ್ರಿಕಾ ಪರ ತಬ್ರೇಝ್ ಶಂಸಿ ಹಾಗೂ ಮಾರ್ಕೊ ಯಾನ್ಸೆನ್ ತಲಾ 3 ವಿಕೆಟ್ ಪಡೆದರೆ, ಕಗಿಸೊ ರಬಾಡ ಹಾಗೂ ಅನ್ರಿಕ್ ನೋಕಿಯಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ನಾಡಿದ್ದು ಭಾನುವಾರ ಜೂನ್ 29 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಅಥವಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT