ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ 13 ವರ್ಷಗಳ ಬಳಿಕ ವಿಶ್ವಕಪ್ ಅನ್ನು ಗೆದ್ದು ಬೀಗಿದ್ದು ಟೀಂ ಇಂಡಿಯಾ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿದೆ.
ಭಾರತ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ದೇಶದ ಗಲ್ಲಿ ಗಲ್ಲಿಗಳಲ್ಲಿ ಗೆಲುವಿನ ಸಂಭ್ರಮಾಚರಣೆ ನಡೆಸಿದರು.
ಟೀಂ ಇಂಡಿಯಾ ಪರ ಅಭಿಮಾನಿಗಳು ಜಯ ಘೋಷಗಳನ್ನು ಕೂಗಿದರು.