ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸುವ ಮೂಲಕ 13 ವರ್ಷಗಳ ಕಾಯುವಿಕೆಗೆ ಅಂತ್ಯವಾಗಿದ್ದು ಎರಡನೇ ಬಾರಿಗೆ ದಾಖಲೆಯ ಟಿ20 ವಿಶ್ವಕಪ್ ಗೆದ್ದು ಬೀಗಿದೆ.
ಬ್ರಿಡ್ಜ್‌ಟೌನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾಡಿದ್ದ ವಿರಾಟ್ ಕೊಹ್ಲಿ 76 ರನ್ ಗಳ ಅಮೋಘ ಕೊಡುಗೆ ನೀಡಿದರು. ಭಾರತ ಆರಂಭಿಕವಾಗಿ ಪ್ರಮುಖ 3 ವಿಕೆಟ್ ಕಳೆದುಕೊಂಡಿದ್ದಾಗ ಕೊಹ್ಲಿ ಅವರ ತಾಳ್ಮೆಯ ಆಟ ಭಾರತ ಒಂದು ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು. ಇದರ ಪರಿಣಾಮ ಭಾರತ 7 ವಿಕೆಟ್ ಗಳಿಂದ ಗೆಲುವು ಸಾಧಿಸಲು ಸಾಧ್ಯವಾಯಿತು.
ಇನ್ನು ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ವಿರಾಟ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ವೇಳೆ ಮಾತನಾಡಿದ ವಿರಾಟ್ ಕೊಹ್ಲಿ ನಿಜಕ್ಕೂ ಇದು ಅತ್ಯುತ್ತಮ ಕ್ಷಣ. ಯಾಕೆಂದರೆ ಮುಂದೆ ಯುವ ಪೀಳಿಗೆ ಕ್ರಿಕೆಟ್ ತಂಡದ ನೇತೃತ್ವ ವಹಿಸಿಕೊಳ್ಳಬೇಕು. ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಎಂದು ಹೇಳುವ ಮೂಲಕ ವಿರಾಟ್ ಕೊಹ್ಲಿ ಟಿ20ಗೆ ವಿದಾಯ ಹೇಳಿದ್ದಾರೆ.