ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ ಬೌಲರ್ ಜಾರ್ಜಿಯಾ ವಾರೆಹಮ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ ಬೌಲರ್ ಜಾರ್ಜಿಯಾ ವಾರೆಹಮ್ 
ಕ್ರಿಕೆಟ್

RCB vs DC: ಎಬಿ ಡಿವಿಲಿಯರ್ಸ್ ನೆನಪಿಸಿದ ಆರ್‌ಸಿಬಿ ಆಟಗಾರ್ತಿ ಜಾರ್ಜಿಯಾ ವಾರೆಹಮ್, ವಿಡಿಯೋ ವೈರಲ್

Ramyashree GN

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ ಬೌಲರ್ ಜಾರ್ಜಿಯಾ ವಾರೆಹಮ್ ಅವರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಫೀಲ್ಡಿಂಗ್ ಮೂಲಕ ಎಬಿ ಡಿವಿಲಿಯರ್ಸ್ ಅವರನ್ನು ನೆನಪಿಸುವಂತೆ ಮಾಡಿದರು.

ಪಂದ್ಯಾವಳಿಯಲ್ಲಿ ಅಜೇಯರಾಗಿ ಮುನ್ನುಗ್ಗುತ್ತಿದ್ದ ಆರ್‌ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಗ್ಗರಿಸಿದ್ದು, ಡಬ್ಲ್ಯುಪಿಎಲ್ 2024 ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಇಳಿದಿದೆ. ಈಮಧ್ಯೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೊದಲ ಪಂದ್ಯದಲ್ಲೇ ಸೋಲು ಕಂಡಿದ್ದರು ನಂತರದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೇರಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಂಭ್ರಮಾಚರಣೆ

ಗುರುವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 11ನೇ ಓವರ್‌ನಲ್ಲಿ ಡಿ ಕ್ಲರ್ಕ್ ಅವರ ಎಸೆತದಲ್ಲಿ ಶಫಾಲಿ ವರ್ಮಾ ಬಲವಾಗಿ ಬ್ಯಾಟ್ ಬೀಸಿದರು. ಈ ವೇಳೆ ಚೆಂಡು ಸಿಕ್ಸರ್‌ಗೆ ಹೋಗುತ್ತಿದ್ದಾಗ ಓಡಿಬಂದ ವಾರೆಹಮ್ ಜಿಗಿದು ಚೆಂಡನ್ನು ಮತ್ತೆ ಬೌಂಡರಿ ಗೆರೆಯೊಳಗೆ ತಳ್ಳಿದರು. ಇದು ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರನ್ನು ನೆನಪಿಸುವಂತೆ ಮಾಡಿತು.

ಡೆಲ್ಲಿ ಕ್ಯಾಪಿಟಲ್ಸ್ ಎದುರು ಮುಗ್ಗರಿಸಿದ ಆರ್‌ಸಿಬಿ

ಟಾಸ್ ಗೆದ್ದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಅವರು ಬೌಲಿಂಗ್ ಆಯ್ದುಕೊಂಡರು. ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಫಾಲಿ, ಕ್ಯಾಪ್ಸಿ, ಮರಿಝನ್ನೆ ಕಾಪ್ ಮತ್ತು ಜೆಸ್ ಜೊನಾಸೆನ್ ಅವರ ಅದ್ಭುತ ಆಟದಿಂದಾಗಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 194 ರನ್‌ಗಳನ್ನು ಕಲೆಹಾಕಿತು.

ರಾಯಲ್‌ ಚಾಲೆಂಜರ್ಸ್ ತಂಡ

ಡಬ್ಲ್ಯುಪಿಎಲ್ ಆವೃತ್ತಿಯಲ್ಲೇ ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಸೋಲು ಅನುಭವಿಸಿತು. ಸ್ಮೃತಿ ಮಂಧಾನ 43 ಎಸೆತಗಳಲ್ಲಿ 74 ರನ್ ಗಳಿಸಿ ಮಿಂಚಿದರು. ಆದರೆ, ಉಳಿದ ಬ್ಯಾಟರ್‌ಗಳಿಂದ ಉತ್ತಮ ಪ್ರದರ್ಶನ ಬರಲಿಲ್ಲ. ಇದರಿಂದ ಆರ್‌ಸಿಬಿ ಪಂದ್ಯಾವಳಿಯಲ್ಲಿ ಮೊದಲ ಸೋಲು ಕಂಡಿತು.

SCROLL FOR NEXT