ಡೆಲ್ಲಿಗೆ ಮತ್ತೊಂದು ಜಯ 
ಕ್ರಿಕೆಟ್

WPL 2024: ಗುಜರಾತ್ ವಿರುದ್ಧ ಡೆಲ್ಲಿಗೆ ಮತ್ತೊಂದು ಜಯ, ಅಗ್ರಸ್ಥಾನಕ್ಕೇರಿಕೆ

ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಅಮೋಘ ಜಯ ಸಾಧಿಸಿದ್ದು ಮಾತ್ರವಲ್ಲದೇ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಅಮೋಘ ಜಯ ಸಾಧಿಸಿದ್ದು ಮಾತ್ರವಲ್ಲದೇ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡ ಮೊದಲು ಬೌಲಿಂಗ್ ಮಾಡಿತು. ಅದರಂತೆ ಬ್ಯಾಟಿಂಗ್ ನಡೆಸಿದ ಡೆಲ್ಲಿ ತಂಡ ನಾಯಕಿ ಮೆಗ್ ಲ್ಯಾನಿಂಗ್ (55ರನ್) ಅವರ ಅಮೋಘ ಅರ್ಧಶತಕದ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿತು. ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಗುಜರಾತ್ ತಂಡ ನಿಗದಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 138 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಡೆಲ್ಲಿ ವಿರುದ್ಧ 25 ರನ್ ಗಳ ಅಂತರದಲ್ಲಿ ಮಂಡಿಯೂರಿತು.

ಟೂರ್ನಿಯಲ್ಲಿ ಡೆಲ್ಲಿಗೆ ಇದು ಸತತ ನಾಲ್ಕನೇ ಗೆಲುವಾಗಿದ್ದು ಈ ಪಂದ್ಯದ ಗೆಲುವಿನ ಮೂಲಕ ಡೆಲ್ಲಿ ತಂಡ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಡೆಲ್ಲಿ ತಂಡ ಒಟ್ಟು 4 ಪಂದ್ಯಗಳ ಪೈಕಿ 1 ಸೋಲು ಕಂಡು 3ರಲ್ಲಿ ಜಯ ಗಳಿಸಿ 6 ಅಂಕಗಳಿಸಿದ್ದು, +1.251 ರನ್ ರೇನ್ ಹೊಂದಿದೆ. ಆ ಮೂಲಕ ಉತ್ತಮ ರನ್ ರೇಟ್ ಆಧಾರದಲ್ಲಿ ಅಗ್ರ ಸ್ಥಾನಕ್ಕೇರಿದೆ. ಮುಂಬೈ ಇಂಡಿಯನ್ಸ್ ತಂಡ ಕೂಡ 4 ಪಂದ್ಯಗಳ ಪೈಕಿ 1 ರಲ್ಲಿ ಸೋತು, 3ರಲ್ಲಿ ಜಯಗಳಿಸಿ 6 ಅಂಕ ಹೊಂದಿದ್ದು, +0.402 ರನ್ ರೇಟ್ ನೊಂದಿಗೆ 2ನೇ ಸ್ಥಾನದಲ್ಲಿದೆ. 4 ಪಂದ್ಯಗಳ ಪೈಕಿ ತಲಾ 2 ಗೆಲುವು ಮತ್ತು 2 ಸೋಲು ಕಂಡಿರುವ ಆರ್ ಸಿಬಿ 5ನೇ ಸ್ಥಾನಕ್ಕೆ ಕುಸಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT