ಸನ್‌‌ರೈಸರ್ಸ್ ಹೈದರಾಬಾದ್ 
ಕ್ರಿಕೆಟ್

ಐಪಿಎಲ್ 2024: ಏಡೆನ್ ಮಾರ್ಕ್ರಾಮ್ ಬದಲಿಗೆ ಸನ್‌ರೈಸರ್ಸ್ ಹೈದರಾಬಾದ್ ಗೆ ಹೊಸ ನಾಯಕನ ನೇಮಕ

2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿ ಆರಂಭಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಎಲ್ಲ ಹತ್ತು ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಸಿದ್ಧಪಡಿಸುತ್ತಿವೆ. ಹೀಗಿರುವಾಗ, ಪಂದ್ಯಾವಳಿ ಆರಂಭಕ್ಕೂ ಮುನ್ನ ಸನ್‌‌ರೈಸರ್ಸ್ ಹೈದರಾಬಾದ್ ತಂಡವು ಹೊಸ ನಾಯಕನನ್ನು ಘೋಷಿಸಿದೆ.

ಹೈದರಾಬಾದ್: 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿ ಆರಂಭಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಎಲ್ಲ ಹತ್ತು ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಸಿದ್ಧಪಡಿಸುತ್ತಿವೆ. ಹೀಗಿರುವಾಗ, ಪಂದ್ಯಾವಳಿ ಆರಂಭಕ್ಕೂ ಮುನ್ನ ಸನ್‌‌ರೈಸರ್ಸ್ ಹೈದರಾಬಾದ್ ತಂಡವು ಹೊಸ ನಾಯಕನನ್ನು ಘೋಷಿಸಿದೆ.

ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮ್ಮಿನ್ಸ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸಿ ಸೋಮವಾರ ಪ್ರಕಟಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ 30 ವರ್ಷದ ವೇಗಿ ಕಮ್ಮಿನ್ಸ್ ಅವರನ್ನು ಎಸ್ಆರ್‌ಎಚ್ 20.50 ಕೋಟಿ ರೂ.ಗಳಿಗೆ ಖರೀದಿಸಿತ್ತು. ಈ ಮೂಲಕ ಅವರನ್ನು ಎರಡನೇ ದುಬಾರಿ ಆಟಗಾರನನ್ನಾಗಿ ಮಾಡಿದೆ.

2023ರ ಆವೃತ್ತಿಯಲ್ಲಿ ಎಸ್ಆರ್‌ಎಚ್ ತಂಡವನ್ನು ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಅವರ ಬದಲಿಗೆ ಪ್ಯಾಟ್ ಕಮ್ಮಿನ್ಸ್ ಈ ಬಾರಿ ತಂಡವನ್ನು ಮುನ್ನಡೆಸಲಿದ್ದಾರೆ.

'ನಮ್ಮ ಹೊಸ ನಾಯಕ ಪ್ಯಾಟ್ ಕಮ್ಮಿನ್ಸ್' ಎಂದು ಕಮ್ಮಿನ್ಸ್ ಅವರ ಚಿತ್ರದೊಂದಿಗೆ ಸನ್‌ರೈಸರ್ಸ್‌ ಹೈದರಾಬಾದ್ ತಂಡವು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹೇಳಿದೆ.

ಕಮ್ಮಿನ್ಸ್ ಈ ಹಿಂದೆ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್