ಮುಂಬೈ ವಿರುದ್ಧ ಡೆಲ್ಲಿ ಗೆ ಜಯ 
ಕ್ರಿಕೆಟ್

WPL 2024: ಮುಂಬೈ ವಿರುದ್ಧ ಡೆಲ್ಲಿ ಗೆ 29 ರನ್ ಜಯ, 2ನೇ ಸ್ಥಾನಕ್ಕೆ ಜಿಗಿದ RCB

ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 29 ರನ್ ಗಳ ಅಂತರದ ಜಯ ದಾಖಲಿಸಿದ ಬೆನ್ನಲ್ಲೇ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2ನೇ ಸ್ಥಾನಕ್ಕೆ ಜಿಗಿದಿದೆ.

ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 29 ರನ್ ಗಳ ಅಂತರದ ಜಯ ದಾಖಲಿಸಿದ ಬೆನ್ನಲ್ಲೇ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2ನೇ ಸ್ಥಾನಕ್ಕೆ ಜಿಗಿದಿದೆ.

ಹೌದು.. ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಡೆಲ್ಲಿ ತಂಡ ನೀಡಿದ 193 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್ ನಲ್ಲಿ 8 ವಿಕೆಟ್ ಕಳೆದುಕೊಂಡು 163 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 29 ರನ್ ಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿತು. ಅಂತಿಮ ಹಂತದಲ್ಲಿ ಮುಂಬೈನ ಅಮನ್ಜೋತ್ ಕೌರ್ (42 ರನ್) ಗೆಲುವಿಗಾಗಿ ಹರಸಾಹಸ ಪಟ್ಟರಾದರೂ, ಉಳಿದ ಆಟಗಾರ್ತಿಯರಿಂದ ಉತ್ತಮ ಬೆಂಬಲ ದೊರೆಯದೆ ಮುಂಬೈ ತಂಡ ಸೋಲು ಕಂಡಿತು.

ಇದಕ್ಕೂ ಮೊದಲು ಬ್ಯಾಟಿಂಗ್ ನಡೆಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ವನಿತೆಯರ ತಂಡ ನಾಯಕಿ ಮೆಗ್ ಲ್ಯಾನಿಂಗ್ (53 ರನ್), ಜೆಮಿಮಾ ರೋಡ್ರಿಗಸ್ (ಅಜೇಯ 69 ರನ್) ಅಮೋಘ ಬ್ಯಾಟಿಂಗ್ ನೆರವಿನಿಂದ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತ್ತು.

2ನೇ ಸ್ಥಾನಕ್ಕೆ ಜಿಗಿದ ಆರ್ ಸಿಬಿ

ಇಂದು ಆರ್ ಸಿಬಿ ಪಂದ್ಯವಿಲ್ಲವಾದರೂ ಅಂಕಪಟ್ಟಿಯಲ್ಲಿ ಮಾತ್ರ ಆರ್ ಸಿಬಿ ಮತ್ತೆ ಒಂದು ಸ್ಥಾನ ಮೇಲಕ್ಕೆ ಜಿಗಿದಿದೆ. ಇಂದಿನ ಪಂದ್ಯದಲ್ಲಿ ಪ್ರಬಲ ಮುಂಬೈ ಇಂಡಿಯನ್ಸ್ ತಂಡ ಸೋಲು ಕಂಡ ಪರಿಣಾಮ ಆ ತಂಡ ಒಂದು ಸ್ಥಾನ ಕೆಳಕ್ಕೆ ಕುಸಿದಿದ್ದು, ಆರ್ ಸಿಬಿ ಒಂದು ಸ್ಥಾನ ಅಂದರೆ 2ನೇ ಸ್ಥಾನಕ್ಕೇರಿದೆ. ಪಟ್ಟಿಯಲ್ಲಿ ಒಟ್ಟು 5 ಪಂದ್ಯಗಳಿಂದ 4 ರಲ್ಲಿ ಜಯಗಳಿಸಿ 1ರಲ್ಲಿ ಸೋತು 8 ಅಂಕ ಹೊಂದಿರುವ ಡೆಲ್ಲಿ ತಂಡ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, 5 ಪಂದ್ಯಗಳಲ್ಲಿ 2 ಸೋಲು, 3 ಗೆಲುವಿನೊಂದಿಗೆ 6 ಅಂಕ ಗಳಿಸಿರುವ ಆರ್ ಸಿಬಿ 2ನೇ ಸ್ಥಾನದಲ್ಲಿದೆ. ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಎರಡೂ ತಂಡಗಳ ಆರು ಅಂಕ ಹೊಂದಿದ್ದು, ನೆಟ್ ರನ್ ರೇಟ್ ಆಧಾರದಲ್ಲಿ ಉತ್ತಮ ಸ್ಥಿತಿಯಲ್ಲಿರುವ ಆರ್ ಸಿಬಿ (+0.242) 2ನೇ ಸ್ಥಾನದಲ್ಲಿದ್ದು, ಮುಂಬೈ ಇಂಡಿಯನ್ಸ್ (+0.018) ತಂಡ 3ನೇ ಸ್ಥಾನದಲ್ಲಿದೆ.

ಮಹಿಳಾ ಪ್ರೀಮಿಯರ್ ಲೀಗ್ ಅಂಕಪಟ್ಟಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT