ಯುಪಿ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಜಯ 
ಕ್ರಿಕೆಟ್

WPL 2024: ಯುಪಿ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 42 ರನ್ ಜಯ, 3ನೇ ಸ್ಥಾನಕ್ಕೆ ಕುಸಿದ RCB

ಮಹಿಳಾ ಪ್ರೀಮಿಯರ್ ಲೀಗ್ ನ ಇಂದಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮಹಿಳಾ ತಂಡ 42 ರನ್ ಗಳ ಜಯ ದಾಖಲಿಸಿದೆ.

ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ ನ ಇಂದಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮಹಿಳಾ ತಂಡ 42 ರನ್ ಗಳ ಜಯ ದಾಖಲಿಸಿದೆ.

ದೆಹಲಿಯಲ್ಲಿರುವ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್‌ (UP Warriorz) ವಿರುದ್ಧ ಮುಂಬೈ ಇಂಡಿಯನ್ಸ್‌ ತಂಡವು 42 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ಗೆ ಇಳಿದ ಮುಂಬೈ ಇಂಡಿಯನ್ಸ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 160 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು. ಹರ್ಮನ್‌ ಪ್ರೀತ್‌ ಕೌರ್‌ ಬಳಗ ನೀಡಿದ 161 ರನ್‌ಗಳ ಗುರಿ ಬೆನ್ನತ್ತಿದ ಯುಪಿ ವಾರಿಯರ್ಸ್‌ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 118 ರನ್‌ ಗಳಿಸಲಷ್ಟೇ ಶಕ್ತವಾಯಿತು.

3ನೇ ಸ್ಥಾನಕ್ಕೆ ಕುಸಿದ RCB

ಉತ್ತರ ಪ್ರದೇಶ ವಾರಿಯರ್ಸ್‌ ತಂಡವು ಈ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿಯೇ ಮುಂದುವರಿದಿದೆ. 6 ಪಂದ್ಯ ಆಡಿರುವ ಯುಪಿ 4 ಪಂದ್ಯಗಳಲ್ಲಿ ಸೋತು, 2ರಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಮುಂಬೈ ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದು, 2ನೇ ಸ್ಥಾನದಲ್ಲಿದ್ದ ಆರ್ ಸಿಬಿ 3ನೇ ಸ್ಥಾನಕ್ಕೆ ಕುಸಿದಿದೆ. ರನ್‌ರೇಟ್‌ ಆಧಾರದ ಮೇಲೆ ಮುಂಬೈ ಇಂಡಿಯನ್ಸ್‌ ತಂಡವು ಎರಡನೇ ಸ್ಥಾನಕ್ಕೆ ಜಿಗಿದರೆ, ಆರ್‌ಸಿಬಿ ವುಮೆನ್‌ ತಂಡವು ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ.

3ನೇ ಸ್ಥಾನಕ್ಕೆ ಕುಸಿದ RCB

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT