ಶುಭ್ಮನ್ ಗಿಲ್-ರೋಹಿತ್ ಶರ್ಮಾ
ಶುಭ್ಮನ್ ಗಿಲ್-ರೋಹಿತ್ ಶರ್ಮಾ 
ಕ್ರಿಕೆಟ್

IND vs ENG: ರೋಹಿತ್-ಶುಭ್‌ಮನ್ ಗಿಲ್ ಭರ್ಜರಿ ಶತಕ: 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ!

Vishwanath S

ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಶತಕ ಸಿಡಿಸಿದ್ದು 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ.

ಶುಕ್ರವಾರ ಧರ್ಮಶಾಲಾದಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಶತಕ ಬಾರಿಸುವ ಮೂಲಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅನೇಕ ಸಾಧನೆಗಳನ್ನು ಮಾಡಿದ್ದಾರೆ. ರೋಹಿತ್ ಶರ್ಮಾ ಕೇವಲ 154 ಎಸೆತಗಳಲ್ಲಿ 13 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ ತಮ್ಮ 12ನೇ ಟೆಸ್ಟ್ ಶತಕವನ್ನು ಗಳಿಸಿದರು.

ಭಾರತದ ಬ್ಯಾಟ್ಸ್‌ಮನ್ 137 ಎಸೆತಗಳಲ್ಲಿ 10 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ ಶತಕ ಪೂರೈಸಿದರು. ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ವೀಕ್ಷಿಸಲು ಗಿಲ್ ತಂದೆ ಸಹ ಧರ್ಮಶಾಲಾ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಗಿಲ್ ಶತಕ ಪೂರೈಸಿದ ಕೂಡಲೇ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದ ತಂದೆ ಎದ್ದುನಿಂತು ಖುಷಿಯಿಂದ ಎರಡೂ ಕೈಗಳನ್ನು ಗಾಳಿಯಲ್ಲಿ ಮೇಲಕ್ಕೆತ್ತಿದರು. ಗಿಲ್ ತಂದೆಯ ಈ ಪ್ರತಿಕ್ರಿಯೆ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿ ಶುಭಮನ್ ಗಿಲ್ ಅವರ ಎರಡನೇ ಶತಕ ಇದಾಗಿದೆ. ಇದಕ್ಕೂ ಮುನ್ನ ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಗಿಲ್ 104 ರನ್‌ಗಳ ಇನಿಂಗ್ಸ್‌ ಆಡಿದ್ದರು. ಇದರ ನಂತರ, ರಾಜ್‌ಕೋಟ್ ಟೆಸ್ಟ್‌ನಲ್ಲಿ ಗಿಲ್ ಅದ್ಭುತ ಇನ್ನಿಂಗ್ಸ್ ಪ್ರದರ್ಶಿಸಿದರು, ಆದರೆ ಅವರು 91 ರನ್ ಗೆ ಔಟಾಗುವ ಮೂಲಕ ಶತಕ ವಂಚಿತರಾದರು.

ಶುಭಮನ್ ಗಿಲ್ ಇದುವರೆಗೆ ತಮ್ಮ ವೃತ್ತಿಜೀವನದಲ್ಲಿ 25 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ 46 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿರುವ ಅವರು 36.17ರ ಸರಾಸರಿಯಲ್ಲಿ 1483 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರು 4 ಶತಕ ಮತ್ತು 6 ಅರ್ಧ ಶತಕಗಳನ್ನು ಗಳಿಸಿದ್ದಾರೆ, ಇದರಲ್ಲಿ ಅವರ ಗರಿಷ್ಠ ಸ್ಕೋರ್ 128 ರನ್ ಆಗಿದೆ. ಗಿಲ್ ಅವರು ಡಿಸೆಂಬರ್ 2020 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೆಲ್ಬೋರ್ನ್‌ನಲ್ಲಿ ನಡೆದ ಪಂದ್ಯದಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ್ದರು.

ಸದ್ಯ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 318 ರನ್ ಪೇರಿಸಿದೆ. ಇನ್ನು ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 218 ರನ್ ಗಳಿಗೆ ಆಲೌಟ್ ಆಗಿದ್ದು ಭಾರತ 100 ರನ್ ಗಳ ಮುನ್ನಡೆ ಸಾಧಿಸಿದೆ.

SCROLL FOR NEXT