ಟೀಂ ಇಂಡಿಯಾ
ಟೀಂ ಇಂಡಿಯಾ 
ಕ್ರಿಕೆಟ್

IND Vs ENG: ಕ್ರಿಕೆಟ್ ನಲ್ಲಿ 112 ವರ್ಷಗಳ ಹಿಂದಿನ ಐತಿಹಾಸಿಕ ದಾಖಲೆ ಸರಿಗಟ್ಟಿದ ಟೀಂ ಇಂಡಿಯಾ

Vishwanath S

ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 64 ರನ್ ಗಳಿಂದ ಗೆಲುವು ಸಾಧಿಸಿದ್ದು ಈ ಮೂಲಕ ಐತಿಹಾಸಿಕ ದಾಖಲೆ ಸರಿಗಟ್ಟಿದ್ದಾರೆ.

ಟೀಂ ಇಂಡಿಯಾ ಈ ಗೆಲುವಿನ ಮೂಲಕ 112 ವರ್ಷದಲ್ಲೇ ಮೊದಲ ಬಾರಿಗೆ ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಸೋತು ನಂತರ 4-1 ರಿಂದ ಗೆದ್ದ ಏಕೈಕ ತಂಡ ಎಂಬ ಇತಿಹಾಸ ನಿರ್ಮಿಸಿದೆ. ಈ ಸಾಧನೆ ಮಾಡಿರುವುದು ಕೇವಲ 2 ತಂಡಗಳು ಮಾತ್ರ. 1897-98 ಮತ್ತು 1901-02ರಲ್ಲಿ ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯಾ, 1912ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ ಈ ಸಾಧನೆ ಮಾಡಿತ್ತು. ಇದೀಗ ಈ ಸಾಧನೆ ಕೂಡ ಭಾರತ ಮಾಡಿದೆ.

ಇದೀಗ ಬರೋಬ್ಬರಿ 112 ವರ್ಷಗಳ ಬಳಿಕ ಟೀಂ ಇಂಡಿಯಾ 4-1 ಅಂತರದಿಂದ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ಐತಿಹಾಸಿಕ ದಾಖಲೆ ಬರೆದಿದ್ದು ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೂರನೇ ತಂಡ ಎನಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡವನ್ನು 218 ರನ್ ಗಳಿಗೆ ಭಾರತ ಆಲೌಟ್ ಮಾಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ 477 ಬೃಹತ್ ರನ್ ಕಲೆಹಾಕಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 195 ರನ್ ಗಳಿಗೆ ಸರ್ಪಪತನ ಕಂಡಿದ್ದು ಭಾರತ 64 ರನ್ ಗಳಿಂದ ಗೆಲುವು ಸಾಧಿಸಿದೆ.

SCROLL FOR NEXT