ಟ್ರೋಫಿಯೊಂದಿಗೆ ಡೆಲ್ಲಿ, ಆರ್ ಸಿಬಿ ತಂಡದ ನಾಯಕಿಯರು 
ಕ್ರಿಕೆಟ್

WPL 2024 ಫೈನಲ್; DC vs RCB: ಟಾಸ್ ಗೆದ್ದು, ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ!

ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್ 2024) ನ ಗ್ರ್ಯಾಂಡ್ ಫಿನಾಲೆಯಲ್ಲಿ ದೆಹಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿದ್ದು, ಕದನ ಕೌತುಕ ಸೃಷ್ಟಿಸಿದೆ.

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್ 2024) ನ ಗ್ರ್ಯಾಂಡ್ ಫಿನಾಲೆಯಲ್ಲಿ ದೆಹಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿದ್ದು, ಕದನ ಕೌತುಕ ಸೃಷ್ಟಿಸಿದೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ದಿಶಾ ಕಸತ್ ಬದಲಿಗೆ ಎಸ್ ಮೇಘನಾ ಆರ್‌ಸಿಬಿಯಲ್ಲಿ ಆಡುತ್ತಿದದರೆ, ಕ್ಯಾಪಿಟಲ್ಸ್ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಈ ಆವೃತ್ತಿಯಲ್ಲಿ ಮೊದಲಿಗೆ ಫೈನಲ್ ತಲುಪಿದ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ವಿಶ್ವಾಸದಲ್ಲಿದ್ದರೆ, ಆರ್ ಸಿಬಿ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಕ್ಕುವ ಕನಸು ಕಾಣುತ್ತಿದೆ.ಹೀಗಾಗಿ ಉಭಯ ತಂಡಗಳ ನಡುವೆ ಪ್ರಶಸ್ತಿಗಾಗಿ ತೀವ್ರ ಪೈಪೋಟಿ ಕಂಡುಬರಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂತಿದೆ: ಮೆಗ್ ಲ್ಯಾನಿಂಗ್(ನಾಯಕಿ) ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸೆ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ(ಪ), ಶಿಖಾ ಪಾಂಡೆ, ಮಿನ್ನು ಮಣಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂತಿದೆ: ಸ್ಮೃತಿ ಮಂಧಾನ(ನಾಯಕಿ) ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್(ವಿಕೆಟ್ ಕೀಪರ್) ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಠಾಕೂರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT