ಆರ್ ಸಿಬಿ ತಂಡ 
ಕ್ರಿಕೆಟ್

WPL 2024 Final: ಡೆಲ್ಲಿ ತಂಡವನ್ನು 113 ರನ್ ಗಳಿಗೆ ಕಟ್ಟಿ ಹಾಕಿದ RCB

WPL 2024 ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)ತಂಡ 113 ರನ್ ಗಳಿಗೆ ಕಟ್ಟಿಹಾಕಿದೆ.

ನವದೆಹಲಿ: WPL 2024 ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)ತಂಡ 113 ರನ್ ಗಳಿಗೆ ಕಟ್ಟಿಹಾಕಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮ ಆರಂಭ ಪಡೆಯಿತು. ಆದರೆ 11 ಓವರ್ ನಲ್ಲಿ ಶ್ರೇಯಾಂಕ ಪಟೇಲ್ ಅವರು 23 ರನ್ ಗಳಿಸಿದ್ದ ಮೆಗ್ ಲ್ಯಾನಿಂಗ್ ಅವರನ್ನು ಔಟ್ ಮಾಡುವ ಮೂಲಕ ಡೆಲ್ಲಿಗೆ ಮೊದಲ ಆಘಾತ ನೀಡಿದರು.

ಈ ಪಂದ್ಯದಲ್ಲಿ ಶ್ರೇಯಾಂಕ ಪಟೇಲ್ ನಾಲ್ಕು ವಿಕೆಟ್ ಪಡೆದರು ಮಾರಕರಾದರು. ಇನ್ನು ಮೊಲಿನೆಕ್ಸ್ ಸಹ ಮೂರು ವಿಕೆಟ್ ಪಡೆದು ಎದುರಾಳಿಗಳಿಗೆ ದುಸ್ವಪ್ನವಾದರು. ಇನ್ನು ಆಶಾ ಶೋಭನ ಸಹ 2 ವಿಕೆಟ್ ಪಡೆದಿದ್ದಾರೆ.

ಡೆಲ್ಲಿ ಪರ ಶಫಾಲಿ ವರ್ಮಾ 44 ರನ್, ರಾಧಾ ಯಾದವ್ 12, ಅನುರಾಧ ರೆಡ್ಡಿ 10 ರನ್ ಬಾರಿಸಿದ್ದು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 113 ರನ್ ಗಳಿಗೆ ಆಲೌಟ್ ಆಗಿದ್ದು ಆರ್ ಸಿಬಿಗೆ 114 ರನ್ ಗಳ ಗುರಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT