ಚೆನ್ನೈ ತಂಡ online desk
ಕ್ರಿಕೆಟ್

IPL 2024: RCB ವಿರುದ್ಧ ಚೆನ್ನೈ ತಂಡಕ್ಕೆ 6 ವಿಕೆಟ್ ಜಯ

ಚೆನ್ನೈ ನಲ್ಲಿ ನಡೆದ ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲು ಕಂಡಿದೆ.

ಚೆನ್ನೈ: ಚೆನ್ನೈ ನಲ್ಲಿ ನಡೆದ ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆರ್ ಸಿಬಿ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 173 ರನ್ ಗಳಿಸಿತು.

ಆರ್ ಸಿಬಿ ಪರ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ 20 ಎಸೆತಗಳಲ್ಲಿ 21 ರನ್ ಗಳಿಸಿದರೆ, ಫಾಫ್ ಡು ಪ್ಲೆಸಿಸ್ 23 ಎಸೆತಗಳಲ್ಲಿ 35 ರನ್ ಗಳನ್ನು ಗಳಿಸಿ ತಂಡಕ್ಕೆ ನೆರವಾದರು. ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್ ಸೇರಿದಂತೆ ಮಧ್ಯಮಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯ ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು.

ಅನುಜ್ ರಾವತ್ 25 ಎಸೆತಗಳಲ್ಲಿ 48 ರನ್ ಗಳಿಸಿ ತಂಡ 173 ರನ್ ಗಳಿಸಲು ನೆರವಾದರು. ದಿನೇಶ್ ಕಾರ್ತಿನ್ ಔಟ್ ಆಗದೇ 26 ಎಸೆತಗಳಲ್ಲಿ 38 ರನ್ ಗಳಿಸಿದರು. 174 ರನ್ ಗಳ ಗುರಿ ಬೆನ್ನಟ್ಟಿದ ಸಿಎಸ್ ಕೆ ತಂಡದ ಮೇಲೆ ಆರ್ ಸಿಬಿ ಬೌಲರ್ ಗಳು ಆರಂಭದಲ್ಲಿ ನಿಯಂತ್ರಣ ಸಾಧಿಸಿದರು. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ 15 ಎಸೆತಗಳಲ್ಲಿ 15 ರನ್ ರಚಿನ್ ರವೀಂದ್ರ 15 ಎಸೆತಗಳಲ್ಲಿ 37 ರನ್ ಗಳಿಸಿದರೆ, ಅಜಿಂಕ್ಯಾ ರೆಹಾನೆ 19 ಎಸೆತಗಳಲ್ಲಿ 27 ರನ್ ಡೇರಿಲ್ ಮಿಚೆಲ್ 18 ಎಸೆತಗಳಲ್ಲಿ 22 ರನ್ ಗಳಿಸಿದರು. ಶಿವಂ ದುಬೆ 28 ಎಸೆತಗಳಲ್ಲಿ 34 ರನ್ ಗಳಿಸಿದರೆ, ರವೀಂದ್ರ ಜಡೇಜಾ 17 ಎಸೆತಗಳಲ್ಲಿ 25 ರನ್ ಗಳಿಸಿ ತಂಡ ಗೆಲ್ಲುವುದಕ್ಕೆ ನೆರವಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!