ಕೆಕೆಆರ್  online desk
ಕ್ರಿಕೆಟ್

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 4 ವಿಕೆಟ್ ಜಯ, SRH ವಿರುದ್ಧ KKR ಗೆ 4 ರನ್ ಗೆಲುವು!

ಕೋಲ್ಕತ್ತಾದಲ್ಲಿ ನಡೆದ ಐಪಿಎಲ್ 2024 ರ 3 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 4 ರನ್ ಗಳ ಗೆಲುವು ದಕ್ಕಿದೆ.

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ನಡೆದ ಐಪಿಎಲ್ 2024 ರ 3 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 4 ರನ್ ಗಳ ಗೆಲುವು ದಕ್ಕಿದೆ. ಟಾಸ್ ಗೆದ್ದ ಸನ್ ರೈಸರ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಕೋಲ್ಕತ್ತ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತು.

ಕೋಲ್ಕತ್ತಾ ಪರ ಫಿಲಿಪ್ ಸಾಲ್ಟ್ 40 ಎಸೆತಗಳಲ್ಲಿ 54 ರನ್ ಗಳಿಸಿದರೆ, ಆಂಡ್ರೆ ರಸೆಲ್ 25 ಎಸೆತಗಳಲ್ಲಿ 64 ರನ್ ಗಳಿಸಿ ತಂಡ ಉತ್ತಮ ಮೊತ್ತ ಗಳಿಸುವುದಕ್ಕೆ ನೆರವಾದರು. ಸನ್ ರೈಸರ್ಸ್ ತಂಡದ ಪರ ಆರಂಭಿಕ ಆಟಗಾರರಾದ ಮಯಾಂಕ್ ಅಗರ್ವಾಲ್ (21 ಎಸೆತಗಳಲ್ಲಿ 32 ರನ್) ಅಭಿಷೇಕ್ ಶರ್ಮಾ (19 ಎಸೆತಗಳಲ್ಲಿ 32 ರನ್ ಗಳಿಸಿದರು) ಹೆನ್ರಿಕ್ ಕ್ಲಾಸೆನ್ 29 ಎಸೆತಗಳಲ್ಲಿ 63 ರನ್ ಗಳಿಸಿ ತಂಡ ಕೆಕೆಆರ್ ವಿರುದ್ಧ ಗೆಲುವು ಸಾಧಿಸಲು ನೆರವಾದರಾದರೂ ಕೆಕೆಆರ್ ಬೌಲರ್ ಗಳ ಎದುರು ಎಸ್ ಆರ್ ಹೆಚ್ ಬ್ಯಾಟ್ಸ್ ಮನ್ ಗಳು ಮಂಕಾದರು. ಎಸ್ ಆರ್ ಹೆಚ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿ 4 ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತ್ತು.

ಇನ್ನು ಮತ್ತೊಂದು ಪಂದ್ಯದಲ್ಲಿ ಪಂಜಾಬ್ ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡದ ನಡುವಿನ ಪಂದ್ಯದಲ್ಲಿ ಪಂಜಾಬ್ ತಂಡ 4 ವಿಕೆಟ್ ಗಳ ಗೆಲುವು ದಾಖಲಿಸಿದೆ. 20 ಓವರ್ ಗಳಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದರೆ, ಪಂಜಾಬ್ ತಂಡ 19.2 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್