ಸಂಜು ಸ್ಯಾಮ್ಸನ್ 
ಕ್ರಿಕೆಟ್

IPL 2024: ಸಂಜು ಸ್ಯಾಮ್ಸನ್ ಅಬ್ಬರ, 20 ರನ್ ಗಳಿಂದ ಲಕ್ನೋ ಮಣಿಸಿದ ರಾಜಸ್ಥಾನ ರಾಯಲ್ಸ್

ತವರಿನಲ್ಲಿ ನಡೆದ ಐಪಿಎಲ್ 2024ರ ಆವೃತ್ತಿಯ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ರನ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿತು.

ಜೈಪುರ: ತವರಿನಲ್ಲಿ ನಡೆದ ಐಪಿಎಲ್ 2024ರ ಆವೃತ್ತಿಯ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ರನ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿತು.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 193 ರನ್ ಕಲೆಹಾಕಿತು. ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ 24, ಜೊಸ್ ಬಟ್ಲರ್ 11 ರನ್ ಗಳಿಸಿ ಬೇಗನೆ ಔಟಾದರು. ನಂತರ ಬಂದ ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ 6 ಸಿಕ್ಸರ್, 3 ಬೌಂಡರ್ ಗಳೊಂದಿಗೆ ಅಜೇಯ 82 ರನ್ ಗಳಿಸುವ ಮೂಲಕ ತಂಡ ಗೆಲುವಲ್ಲಿ ಪ್ರಮುಖ ಕೊಡುಗೆ ನೀಡಿದರು. ಅವರಿಗೆ ಜೊತೆಯಾದ ರಿಯಾನ್ ಪರಾಗ್ 43, ಶಿಮ್ರಾನ್ ಹೆಟ್ಮೈರ್ 5 ರನ್ ಗಳಿಸಿದರು.

ರಾಜಸ್ಥಾನ ರಾಯಲ್ಸ್ ನೀಡಿದ 194 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ ತಂಡ ದ ಪರ ನಾಯಕ ಕೆಎಲ್ ರಾಹುಲ್ 58, ನಿಕೊಲಾಸ್ ಪೊರಾನ್ 64 ರನ್ ಗಳಿಸಿದದ್ದು ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಇದರಿಂದಾಗಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಲಷ್ಟೇ ಶಕ್ತವಾಯಿತು. ಪರಿಣಾಮ ರಾಜಸ್ಥಾನ ರಾಯಲ್ಸ್ 20 ರನ್ ಗಳ ಅಂತರದಿಂದ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT