ಐಪಿಎಲ್ 2024 ಪಂದ್ಯ online desk
ಕ್ರಿಕೆಟ್

IPL 2024: ಗುಜರಾತ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 63 ರನ್ ಭರ್ಜರಿ ಜಯ!

ಚೆನ್ನೈ ನಲ್ಲಿ ನಡೆದ ಐಪಿಎಲ್ 2024 ನ 7 ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 63 ರನ್ ಗಳಿಂದ ಸೋಲು ಕಂಡಿದೆ.

ಚೆನ್ನೈ: ಚೆನ್ನೈ ನಲ್ಲಿ ನಡೆದ ಐಪಿಎಲ್ 2024 ನ 7 ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 63 ರನ್ ಗಳಿಂದ ಸೋಲು ಕಂಡಿದೆ. ನಿಗದಿತ 20 ಓವರ್ ಗಳಲ್ಲಿ ಚೆನ್ನೈ ತಂಡ 6 ವಿಕೆಟ್ ಗಳ ನಷ್ಟಕ್ಕೆ ಎದುರಾಳಿ ತಂಡಕ್ಕೆ 207 ರನ್ ಗಳ ಗುರಿ ನೀಡಿತ್ತು.

ರನ್ ಚೇಸಿಂಗ್ ನಲ್ಲಿ ಗುಜರಾತ್ ತಂಡ ಆರಂಭದಲ್ಲೇ ಮುಗ್ಗರಿಸಿತ್ತು. ಆರಂಭಿಕ ಆಟಗಾರರಾದ ವೃದ್ಧಿಮಾನ್ ಸಹಾ (17 ಎಸೆತಗಳಲ್ಲಿ 21 ರನ್) ಹಾಗೂ ಶುಭ್ಮನ್ ಗಿಲ್ (5 ಎಸೆತಗಳಲ್ಲಿ 8 ರನ್) ಗಳಿಸಿ ಆರಂಭಿಕ ಆಘಾತ ನೀಡಿದರು.

ಬಳಿಕ ಸಾಯಿ ಸುದರ್ಶನ್ 31 ಎಸೆತಗಳಲ್ಲಿ 37 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಗುಜರಾತ್ ಟೈಟನ್ಸ್ ನ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಚೆನ್ನೈ ತಂಡದ ಬೌಲಿಂಗ್ ಅಬ್ಬರವನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗದೇ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ಚೆನ್ನೈ ತಂಡದ ಪರ ದೀಪಕ್ ಚಹಾರ್, ಮುಸ್ತಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ ತಲಾ 2 ವಿಕೆಟ್ ಪಡೆದರೆ, ಡೇರಿಲ್ ಮಿಚೆಲ್, ಮತೀಶ ಪತಿರಾನ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT