IPL 2024: 'ಕರುಣೆಯೇ ಇಲ್ಲ'! ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿಗೆ ಹಿಗ್ಗಾಮುಗ್ಗಾ ಥಳಿಸಿದ ಭದ್ರತಾ ಸಿಬ್ಬಂದಿ, ವಿಡಿಯೋ ವೈರಲ್!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 25 ರಂದು ನಡೆದ ಐಪಿಎಲ್ ಆವೃತ್ತಿಯ ಪಂದ್ಯದಲ್ಲಿ ಭದ್ರತಾ ನಿಯಮವನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ್ದ ಅಭಿಮಾನಿಗೆ ಕ್ರೀಡಾಂಗಣದ ಭದ್ರತಾ ಸಿಬ್ಬಂಧಿಗಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 25 ರಂದು ನಡೆದ ಐಪಿಎಲ್ ಆವೃತ್ತಿಯ ಪಂದ್ಯದಲ್ಲಿ ಭದ್ರತಾ ನಿಯಮವನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ್ದ ಅಭಿಮಾನಿಗೆ ಕ್ರೀಡಾಂಗಣದ ಭದ್ರತಾ ಸಿಬ್ಬಂಧಿಗಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ ಮತ್ತು ಆರ್ಸಿಬಿ ನಡುವೆ ಪಂದ್ಯ ನಡೆಯುತ್ತಿತ್ತು. RCB ಬ್ಯಾಟಿಂಗ್ ಮಾಡುವ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿಯೊಬ್ಬ ವಿರಾಟ್ ಕೊಹ್ಲಿ ಪಾದ ಹಿಡಿದುಕೊಂಡಿದ್ದಾನೆ. ನಂತರ ಕೊಹ್ಲಿಯನ್ನು ತಬ್ಬಾಡಿದ್ದನು. ಕೂಡಲೇ ಓಡಿಬಂದ ಮೈದಾನದ ಸೆಕ್ಯೂರಿಟಿ ಗಾರ್ಡ್ಗಳು ಆತನನ್ನು ಮೈದಾನದಿಂದ ಹೊರಕ್ಕೆ ಎಳೆದೊಯ್ದಿದ್ದರು.
ಈ ವೇಳೆ ಅಭಿಮಾನಿಗೆ ಮೈದಾನದ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗುತ್ತಿದೆ. ಇನ್ನು ಅಭಿಮಾನಿ ವಿರುದ್ಧ ಕಬ್ಬನ್ ಪಾಕ್ ಪೊಲೀಸ್ ಠಾಣೆಯಲ್ಲಿ ದೂರ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.