ರಿಷಬ್ ಪಂತ್ 
ಕ್ರಿಕೆಟ್

IPL 2024: ತಾಳ್ಮೆ ಕಳೆದುಕೊಂಡ ರಿಷಬ್ ಪಂತ್; ಕೋಪದಿಂದ ಗೋಡೆಗೆ ಬ್ಯಾಟ್ ಬಡಿದ ಬ್ಯಾಟರ್, ವಿಡಿಯೋ ವೈರಲ್

15 ತಿಂಗಳ ಸುದೀರ್ಘ ವಿರಾಮದ ನಂತರ ಐಪಿಎಲ್ 2024ರಲ್ಲಿ ಮರಳುತ್ತಿರುವ ರಿಷಬ್ ಪಂತ್ ತಮ್ಮ ಫಾರ್ಮ್‌ನೊಂದಿಗೆ ಹೋರಾಡುತ್ತಿದ್ದಾರೆ. ಈ ವರ್ಣರಂಜಿತ ಲೀಗ್‌ನಲ್ಲಿ ಇದುವರೆಗೆ ಆಡಿದ ಎರಡು ಪಂದ್ಯಗಳಲ್ಲಿ ಅವರು ಆರಂಭವನ್ನು ಪಡೆದರು, ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗಲಿಲ್ಲ.

15 ತಿಂಗಳ ಸುದೀರ್ಘ ವಿರಾಮದ ನಂತರ ಐಪಿಎಲ್ 2024ರಲ್ಲಿ ಮರಳುತ್ತಿರುವ ರಿಷಬ್ ಪಂತ್ ತಮ್ಮ ಫಾರ್ಮ್‌ನೊಂದಿಗೆ ಹೋರಾಡುತ್ತಿದ್ದಾರೆ. ಈ ವರ್ಣರಂಜಿತ ಲೀಗ್‌ನಲ್ಲಿ ಇದುವರೆಗೆ ಆಡಿದ ಎರಡು ಪಂದ್ಯಗಳಲ್ಲಿ ಅವರು ಆರಂಭವನ್ನು ಪಡೆದರು, ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಪಂಜಾಬ್ ಕಿಂಗ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 13 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಎರಡನೇ ಪಂದ್ಯದಲ್ಲಿ 26 ಎಸೆತಗಳಲ್ಲಿ 28 ರನ್ ಗಳಿಸಿದ್ದರು. ದೊಡ್ಡ ಸ್ಕೋರ್ ಮಾಡದ ಹತಾಶೆ ಈಗ ರಿಷಬ್ ಪಂತ್ ಅವರ ಮುಖ ಭಾವಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಔಟಾದ ನಂತರ, ಪಂತ್ ಕೋಪದಿಂದ ಗೋಡೆಗೆ ಬ್ಯಾಟ್ ನಿಂದ ಹೊಡೆಯುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

RR ವಿರುದ್ಧದ ಪಂದ್ಯದಲ್ಲಿ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದರು, ಆದರೆ ತಂಡವು ಮಿಚೆಲ್ ಮಾರ್ಷ್ ಮತ್ತು ರಿಕಿ ಭುಯಿ ಔಟಾದ ನಂತರ ಬಂದ ಪಂತ್ ಡೇವಿಡ್ ವಾರ್ನರ್ ಜೊತೆಗೊ ದೊಡ್ಡ ಇನ್ನಿಂಗ್ಸ್ ಆಡುವ ಇಂಗಿತವಿತ್ತು. ಆದರೆ 28 ರನ್ ಗಳಿಸಿದ್ದಾಗ ಪಂತ್ ಯುಜ್ವೇಂದ್ರ ಚಹಾಲ್‌ ಬೌಲಿಂಗ್ ನಲ್ಲಿ ಔಟಾಗಿ ಹೊರನಡೆದರು.

ರಿಷಬ್ ಪಂತ್ 2 ಬೌಂಡರಿ ಮತ್ತು 1 ಸಿಕ್ಸರ್ ಸೇರಿ 28 ರನ್ ಬಾರಿಸಿದ್ದರು. ಪಂತ್ ಔಟಾದ ಬಳಿಕ ಪೆವಿಲಿಯನ್ ಗೆ ಮರಳುತ್ತಿದ್ದಾಗ ಮೈದಾನದ ಹೊರಗೆ ಹೋಗಿ ಗೋಡೆಗೆ ಬ್ಯಾಟ್ ಬಡಿದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT