ಲಖನೌ ತಂಡಕ್ಕೆ ಜಯ 
ಕ್ರಿಕೆಟ್

ಐಪಿಎಲ್ 2024: ಪಂಜಾಬ್ ವಿರುದ್ಧ 21 ರನ್ ಗಳ ಭರ್ಜರಿ ಜಯ ದಾಖಲಿಸಿದ ಲಖನೌ

ಐಪಿಎಲ್ 2024ರ ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ತಂಡ 21 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಲಖನೌ: ಐಪಿಎಲ್ 2024ರ ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ತಂಡ 21 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಲಖನೌನ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಮ್​ನಲ್ಲಿ ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಖನೌ ಸೂಪರ್ ಜೈಂಟ್ಸ್ ತಂಡ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 199 ರನ್ ಬಾರಿಸಿತು.

ಆ ಮೂಲಕ ಪಂಜಾಬ್ ಗೆ ಗೆಲ್ಲಲು 200 ರನ್ ಗಳ ಬೃಹತ್ ಗುರಿ ನೀಡಿತು. ಈ ಗುರಿಯನ್ನು ಬೆನ್ನು ಹತ್ತಿದ ನಿಗಧಿತ 20 ಓವರ್ ಗಳಲ್ಲಿ 5 ವಿಕೆಟ್​ಗೆ 178 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 21 ರನ್ ಗಳ ಸೋಲು ಕಂಡಿತು.

ಲಖನೌ ಪರ ಕ್ವಿಂಟನ್ ಡಿಕಾಕ್ ಅರ್ಧಶತಕ ಸಿಡಿಸಿದರೆ, ನಾಯಕ ನಿಕೋಲಸ್ ಪೂರನ್ 42 ರನ್ ಮತ್ತು ಕೃಣಾಲ್ ಪಾಂಡ್ಯ ಅಜೇಯ 43 ರನ್ ಸಿಡಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. ಇತ್ತ ಪಂಜಾಬ್ ಪರ ನಾಯಕ ಶಿಖರ್ ಧವನ್ 70ರನ್ ಸಿಡಿಸಿದರೆ, ಜಾನಿ ಬೇರ್ ಸ್ಟೋ 42 ರನ್ ಗಳಿಸಿದರು. ಉತ್ತಮ ಆರಂಭ ಪಡೆದ ಪಂಜಾಬ್ ತಂಡ ಮೊದಲ ವಿಕೆಟ್ ಗೆ 100 ರನ್ ಗಳ ಜೊತೆಯಾಟ ನೀಡಿ ಗೆಲುವಿನತ್ತ ದಾಪುಗಾಲಿರಿಸಿತ್ತು. ಆದರೆ ಮಧ್ಯಮ ಕ್ರಮಾಂಕದ ದಿಢೀರ್ ಕುಸಿತ ತಂಡದ ಸೋಲಿಗೆ ಕಾರಣವಾಯಿತು.

ಲಖನೌ ಪರ 3 ವಿಕೆಟ್ ಪಡೆದ ಮಯಾಂಕ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT