ಗುಜರಾತ್ ಟೈಟಾನ್ಸ್ ತಂಡ 
ಕ್ರಿಕೆಟ್

IPL 2024: ಸ್ಫೋಟಕ ಬ್ಯಾಟಿಂಗ್, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್​​ಗೆ 7 ವಿಕೆಟ್‌ ಸುಲಭ ಗೆಲುವು

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಜು ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ 7 ವಿಕೆಟ್‌ಗಳ ಗೆಲುವು ದಾಖಲಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಜು ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ 7 ವಿಕೆಟ್‌ಗಳ ಗೆಲುವು ದಾಖಲಿಸಿದ್ದು, ನಡೆಯುತ್ತಿರುವ 2024ರ ಐಪಿಎಲ್ ಆವೃತ್ತಿಯಲ್ಲಿ ಎರಡನೇ ಗೆಲುವು ಇದಾಗಿದೆ.

GT 20 ಓವರ್‌ಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವನ್ನು 162 ರನ್ ಗಳಿಗೆ ಸೀಮಿತಗೊಳಿಸುವಲ್ಲಿ ಯಶಸ್ವಿಯಾಯಿತು. ಮೋಹಿತ್ ಶರ್ಮಾ ಅವರ ಮೂರು ವಿಕೆಟ್ಗಳ ಗೋಚಲಿನ ನೆರವಿನಿಂದ ಗುಜರಾತ್ ಟೈಟಾನ್ಸ್ ಪಂದ್ಯದ ಮೇಲೆ ನಿಯಂತ್ರಣ ಸಾಧಿಸಿತು.

SRH ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಟ್ರಾವಿಸ್ ಹೆಡ್ ಮತ್ತು ಮಯಾಂಕ್ ಅಗರವಾಲ್ ತಮ್ಮ ಇನ್ನಿಂಗ್ಸ್ ಆರಂಭಿಸಿದರು. ಅವರು ಮೊದಲ ವಿಕೆಟ್‌ಗೆ 34 ರನ್‌ಗಳ ಜೊತೆಯಾಟವನ್ನು ನಡೆಸಿದರು. ಈ ಜೊತೆಯಾಟವನ್ನು ಅಜ್ಮತುಲ್ಲಾ ಒಮರ್ಜಾಯ್ ಮುರಿದರು. 17 ಎಸೆತಗಳಲ್ಲಿ 16 ರನ್ ಗಳಿಸಿದ್ದು ಮಾಯಾಂಕ್ ಅಗರವಾಲ್ ರನ್ನು ಔಟ್ ಮಾಡಿದರು. ನಂತರ ಬಂದ ಬ್ಯಾಟರ್ ಗಳು ಬೃಹತ್ ಮೊತ್ತ ಪೇರಿಸುವಲ್ಲಿ ವಿಫಲರಾದರು.

ಪರಿಣಾಮ ಹೈದರಾಬಾದ್ ತಂಡ 162 ರನ್ ಗಳಿಗೆ ಸೀಮಿತವಾಯಿತು. ಹೈದರಾಬಾದ್ ನೀಡಿದ 163 ರನ್ ಗಳ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ಪರ ವೃದ್ಧಿಮಾನ್ ಸಹಾ 25, ಶುಭಮ್ನನ್ ಗಿಲ್ 36 ರನ್ ಗಳಿಸಿದರೆ ನಂತರ ಬಂದ ಸಾಯಿ ಸುದರ್ಶನ್ 45 ರನ್ ಬಾರಿಸಿ ಔಟಾದರು. ಡೇವಿಡ್ ಮಿಲ್ಲರ್ ಅಜೇಯ 44 ಹಾಗೂ ವಿಜಯ್ ಶಂಕರ್ ಅಜೇಯ 14 ರನ್ ಬಾರಿಸಿ ತಂಡ ಗೆಲುವಿನ ದಡ ಸೇರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!