ವಿರಾಟ್ ಕೊಹ್ಲಿ  
ಕ್ರಿಕೆಟ್

ಐಪಿಎಲ್ 2024: ಗುಜರಾತ್ ವಿರುದ್ಧ RCB ಗೆಲುವು; ಪ್ಲೇ ಆಫ್ ಕನಸು ಜೀವಂತ

ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕು ವಿಕೇಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕು ವಿಕೇಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ RCB ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್, ಶಾರುಖ್ ಖಾನ್ 24 ಎಸೆತಗಳಲ್ಲಿ 37 ರನ್, ರಾಹುಲ್ ತೆವಾಟಿಯಾ 21 ಎಸೆತಗಳಲ್ಲಿ 35 ರನ್ ಗಳಿಸಿದರೆ, ಡೇವಿಡ್ ಮಿಲ್ನರ್ 20 ಎಸೆತಗಳಲ್ಲಿ 30 ರನ್ ಗಳಿಸಿದರು. ಇದರಿಂದಾಗಿ ಗುಜರಾತ್ 19.3 ಓವರ್‌ಗಳಲ್ಲಿ 147 ರನ್ ಸೇರಿಸಿತು.

ಗೆಲುವಿಗೆ 148 ರನ್ ಗಳ ಗುರಿ ಬೆನ್ನತ್ತಿದ ಆರ್ ಸಿಬಿ, ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 13. 4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು. ಇದರೊಂದಿಗೆ ಆರ್ ಸಿಬಿಯ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ.

ಆರ್ ಸಿಬಿ ಈ ಗೆಲುವಿನೊಂದಿಗೆ ಆಡಿರುವ 11 ಪಂದ್ಯಗಳಲ್ಲಿ ನಾಲ್ಕು ಗೆಲುವಿನೊಂದಿಗೆ ಒಟ್ಟಾರೆ 8 ಅಂಕಗಳನ್ನು ಗಳಿಸಿದೆ ಮತ್ತು ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಜಿಗಿದಿದೆ.

ಫಾಫ್​ ಡು ಪ್ಲೆಸಿಸ್​ 23 ಎಸೆತಕ್ಕೆ 63 ರನ್ ಬಾರಿಸಿದರು. ಕೇವಲ 3.1 ಓವರ್​ಗಳಲ್ಲಿ 50 ರನ್ ಗಡಿ ದಾಟಿಸಿದ ವಿರಾಟ್ ಕೊಹ್ಲಿ ಮತ್ತು ಫಾಪ್​ ಆರ್ ಸಿಬಿ ಗೆಲುವಿಗೆ ನೆರವಾದರು.

ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್, ಯಶ್ ದಯಾಳ್ ಮತ್ತು ವಿಜಕುಮಾರ್ ವಿಶಾಕ್ 2-2 ವಿಕೆಟ್ ಪಡೆದರೆ, ಕ್ಯಾಮರೂನ್ ಗ್ರೀನ್ ಮತ್ತು ಕರ್ಣ್ ಶರ್ಮಾ 1-1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!