ಪಂಜಾಬ್ ವಿರುದ್ಧ ಚೆನ್ನೈಗೆ ಗೆಲುವು 
ಕ್ರಿಕೆಟ್

IPL 2024: ರವೀಂದ್ರ ಜಡೇಜಾ ಆಲ್ರೌಂಡ್ ಆಟ; ಪಂಜಾಬ್ ವಿರುದ್ಧ ಚೆನ್ನೈಗೆ 28 ರನ್‍ ಜಯ

ಐಪಿಎಲ್ 2024ರ 53ನೇ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರ ಆಲ್‍ರೌಂಡ್ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ), ಪಂಜಾಬ್ ಕಿಂಗ್ಸ್ ವಿರುದ್ಧ 28 ರನ್‍ಗಳ ಭರ್ಜರಿ ಗೆಲುವು ಸಾಧಿಸಿದೆ.

ಧರ್ಮಶಾಲಾ: ಐಪಿಎಲ್ 2024ರ 53ನೇ ಪಂದ್ಯದಲ್ಲಿ ರವೀಂದ್ರ ಜಡೇಜಾ(26 ಎಸೆತಗಳಲ್ಲಿ 43 ರನ್ ಮತ್ತು 3/20) ಅವರ ಆಲ್‍ರೌಂಡ್ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ), ಪಂಜಾಬ್ ಕಿಂಗ್ಸ್ ವಿರುದ್ಧ 28 ರನ್‍ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಂದನ ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 167 ರನ್ ಸೇರಿಸಿತು.

ಗೆಲುವಿಗೆ 168 ರನ್ ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‍ಗಳನ್ನು ಕಳೆದುಕೊಂಡು 139 ರನ್ ಗಳಿಸಿ ಸೋಲಿಗೆ ಶರಣಾಯಿತು. ಈ ಮೂಲಕ ಚೆನ್ನೈ 28 ರನ್‌ಗಳಿಂದ ಗೆಲುವು ಸಾಧಿಸಿತು.

ಚೆನೈ ಪರ ಆರಂಭಿಕರಾಗಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಪಂದ್ಯದ ಎರಡನೇ ಓವರ್‌ನಲ್ಲೇ 9 ರನ್‍ಗಳಿಗೆ ಆರ್ಶದೀಪ್ ಸಿಂಗ್‍ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಎರಡನೇ ವಿಕೆಟ್‍ಗೆ ನಾಯಕ ಗಾಯಕ್ವಾಡ್ ಹಾಗೂ ಡೇರಿಲ್ ಮಿಚೆಲ್ 32 ಎಸೆತಗಳಲ್ಲಿ 57 ರನ್‍ಗಳ ಉತ್ತಮ ಜತೆಯಾಟವಾಡಿದರು. ಗಾಯಕ್ವಾಡ್ 32 ರನ್ ಗಳಿಸಿ ರಾಹುಲ್ ಚಹಾರ್‌ಗೆ ವಿಕೆಟ್ ಒಪ್ಪಿಸಿದರೆ, ಇದರ ಬೆನ್ನಲ್ಲೇ ಕ್ರೀಸ್‍ಗಿಳಿದ ಶಿವಂ ದುಬೆ ಒಂದೇ ಎಸೆತಕ್ಕೆ ಔಟಾಗಿ ಪೆವಿಲಿಯನ್‍ಗೆ ಮರಳಿದರು. ಡೇರಿಲ್ ಮಿಚೆಲ್ 30 ರನ್ ಗಳಿಸಿ ಹರ್ಷಲ್ ಪಟೇಲ್‍ಗೆ ವಿಕೆಟ್ ಒಪ್ಪಿಸಿದರು.

ನಂತರ ಸಂಘಟಿತ ಬೌಲಿಂಗ್‌ ಪ್ರದರ್ಶನ ತೋರಿದ ಚೆನ್ನೈ ಪರ ರವೀಂದ್ರ ಜಡೇಜಾ 3 ವಿಕೆಟ್‌ ಕಬಳಿಸಿದರು. ಸಿಮರ್ಜೀತ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ 2 ವಿಕೆಟ್‌ ಪಡೆದುಕೊಂಡರು. ಇನ್ನು ಮಿಚೆಲ್ ಸ್ಯಾಂಟ್ನರ್ ಹಾಗೂ ಶಾರ್ದೂಲ್ ಠಾಕೂರ್ 1 ವಿಕೆಟ್‌ ಪಡೆದು ಚೆನ್ನೈ ಗೆಲುವಿಗೆ ನೆರವಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT