ಕೆಕೆಆರ್  online desk
ಕ್ರಿಕೆಟ್

IPL 2024: ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ ​ಜಯ: ಅಂಕ ಪಟ್ಟಿಯಲ್ಲಿ ಕೋಲ್ಕತ್ತಾ ತಂಡ ಅಗ್ರ ಸ್ಥಾನಕ್ಕೆ!

ಐಪಿಎಲ್ 2024 ರ ಟೂರ್ನಿ ನಿರ್ಣಾಯಕ ಘಟ್ಟ ತಲುಪಿದ್ದು, ಈ ಹಂತದಲ್ಲಿ ಲಕ್ನೋ ತಂಡದ ವಿರುದ್ದ 98 ರನ್ ಗಳ ಬೃಹತ್ ಜಯ ಗಳಿಸಿರುವ ಕೋಲ್ಕತ್ತ ತಂಡ ಅಂಕಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದೆ.

ನವದೆಹಲಿ: ಐಪಿಎಲ್ 2024 ರ ಟೂರ್ನಿ ನಿರ್ಣಾಯಕ ಘಟ್ಟ ತಲುಪಿದ್ದು, ಈ ಹಂತದಲ್ಲಿ ಲಕ್ನೋ ತಂಡದ ವಿರುದ್ದ 98 ರನ್ ಗಳ ಬೃಹತ್ ಜಯ ಗಳಿಸಿರುವ ಕೋಲ್ಕತ್ತ ತಂಡ ಅಂಕಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದೆ.

ಪ್ಲೇ ಆಫ್ ಗೆ ಪ್ರವೇಶ ಪಡೆಯುವುದಕ್ಕೆ ಪೈಪೋಟಿ ತೀವ್ರಗೊಂಡಿದ್ದು, ಏ.05 ರಂದು ನಡೆದ 2 ಪಂದ್ಯಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ, ಲಖನೌ ತಂಡವನ್ನು 98 ರನ್ ಗಳಿಂದ ಮಣಿಸಿದ ಕೆಕೆಆರ್ ಗೆದ್ದಿದೆ.

ಐಪಿಎಲ್ 2024 ರ ತಂಡಗಳ ಅಂಕಪಟ್ಟಿ

ಈ ಎರಡೂ ಪಂದ್ಯಗಳ ಗೆಲುವಿನ ಪರಿಣಾಮವಾಗಿ ಐಪಿಎಲ್ 2024 ಟೂರ್ನಿಯ ಅಂಕಪಟ್ಟಿಯಲ್ಲಿ ಗಮನಾರ್ಹ ಬದಲಾವಣೆಯಾಗಿದೆ.

16 ಅಂಕಗಳೊಂದಿಗೆ ಕೆಕೆಆರ್​ ಮೊದಲ ಸ್ಥಾನದಲ್ಲಿದ್ದರೆ, ಅಗ್ರಸ್ಥಾನದಲ್ಲಿದ್ದ ರಾಜಸ್ಥಾನ್ ತಂಡ​ 2ನೇ ಸ್ಥಾನಕ್ಕೆ ಕುಸಿದಿದೆ. ಉಭಯ ತಂಡಗಳಿಗೂ 16 ಅಂಕ ಇದ್ದರೂ ಕೆಕೆಆರ್​ ರನ್​ ರೇಟ್​ ಉತ್ತಮವಾಗಿರುಬ ಹಿನ್ನೆಲೆಯಲ್ಲಿ ಮೊದಲ ಸ್ಥಾನಕ್ಕೇರಿದೆ. ಲಕ್ನೋ 5ನೇ ಸ್ಥಾನಕ್ಕೆ ಕುಸಿದಿದ್ದರೆ, ಪಂಜಾಬ್​ ವಿರುದ್ಧ 28 ರನ್​​ ಅಂತರದ ಗೆಲುವು ಸಾಧಿಸಿದ ಹಾಲಿ ಚಾಂಪಿಯನ್​ ಚೆನ್ನೈ 5ರಿಂದ 3ನೇ ಸ್ಥಾನಕ್ಕೇರಿದೆ. ಪಂಜಾಬ್​ 8ನೇ ಸ್ಥಾನದಲ್ಲಿದೆ.

ಮೊದಲ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ತಂಡ ಚೆನ್ನೈ ವಿರುದ್ಧ ಸೋಲು ಕಂಡಿತು. ಟಾಸ್‌ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ರನ್ ಗುರಿ ತಲುಪಲು ವಿಫಲವಾಗಿ ಸೋಲು ಎದುರಿಸಿರುವ ಪಂಜಾಬ್ ಪ್ಲೇ ಆಫ್​ ಹಾದಿ ಕಠಿಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT