ಸೂರ್ಯಕುಮಾರ್ ಯಾದವ್‌ 
ಕ್ರಿಕೆಟ್

ಐಪಿಎಲ್ 2024: ಸೂರ್ಯಕುಮಾರ್ ಶತಕದ ನೆರವಿನಿಂದ ಹೈದರಾಬಾದ್ ವಿರುದ್ಧ ಮುಂಬೈ ಗೆಲುವು

ಐಪಿಎಲ್ 2024ರ 55ನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್‌ ಅವರ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್‌ ಸೋಮವಾರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಮುಂಬೈ: ಐಪಿಎಲ್ 2024ರ 55ನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್‌ ಅವರ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್‌ ಸೋಮವಾರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್‌‌ ತಂಡ, ನಿಗದಿತ 20 ಓವರ್‌ಗೆ 8 ವಿಕೆಟ್ ನಷ್ಟಕ್ಕೆ 173 ರನ್ ಸೇರಿಸಿತು.

ಗೆಲುವಿಗೆ 174 ರನ್ ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ ತಂಡ, 17.2 ಓವರ್‌ಗೆ 3 ವಿಕೆಟ್ ಕಳೆದುಕೊಂಡು 174 ರನ್‌ ಗಳಿಸುವ ಮೂಲಕ 7 ವಿಕೆಟ್‌‌ಗಳ ಭರ್ಜರಿ ಗೆಲುವು ದಾಖಲಿಸಿತು.

ಮುಂಬೈ ಇಂಡಿಯನ್ಸ್‌ ಪರ ಆರಂಭಿಕರಾಗಿ ಕಣಕ್ಕಿಳಿದ ಇಶಾನ್‌ ಕಿಶನ್‌ 9 ರನ್ ಹಾಗೂ ರೋಹಿತ್‌ ಶರ್ಮಾ 4 ರನ್ ಸಿಡಿಸಿ ಔಟ್ ಆದರು. ನಮನ್‌ ದೀರ್‌ ಸಹ ಶೂನ್ಯಕ್ಕೆ ಮರಳಿದರು. ಆದರೆ ಸೂರ್ಯಕುಮಾರ್ ಯಾದವ್‌ಗೆ ತಿಲಕ್‌ ವರ್ಮಾ ಉತ್ತಮ ಸಾಥ್‌ ನೀಡಿದರು. ಸೂರ್ಯಕುಮಾರ್ ಯಾದವ್‌ ಅವರು ಕೇವಲ 51 ಎಸೆತದಲ್ಲಿ 12 ಫೋರ್‌ ಮತ್ತು 6 ಸಿಕ್ಸ್‌ ಮೂಲಕ 102 ರನ್‌ ಸಿಡಿಸಿ ಅಬ್ಬರಿಸಿದರು.

ಹೈದರಾಬಾದ್‌ ಪರ ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್ ಮತ್ತು ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT