ಕ್ರಿಕೆಟ್

IPL 2024: ಪಂಜಾಬ್ ಕಿಂಗ್ಸ್ ವಿರುದ್ಧದ ಸವಾಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಿದ್ಧತೆ, ಗೆಲ್ಲೋದು ಯಾರು?

ಐಪಿಎಲ್ 2024ರ ಆವೃತ್ತಿಯಲ್ಲಿ ಸತತ ಸೋಲುಗಳ ಬಳಿಕ ಗೆಲುವಿನ ಲಯಕ್ಕೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಇದೀಗ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಪರಸ್ಪರ ಸೆಣಸಲಿವೆ. ಧರ್ಮಶಾಲಾದ ಎಚ್‌ಪಿಸಿಎ ಅಂಗಳದಲ್ಲಿ ಗುರುವಾರ ಈ ಪಂದ್ಯ ನಡೆಯಲಿದೆ.

ಐಪಿಎಲ್ 2024ರ ಆವೃತ್ತಿಯಲ್ಲಿ ಸತತ ಸೋಲುಗಳ ಬಳಿಕ ಗೆಲುವಿನ ಲಯಕ್ಕೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ 10 ರಿಂದ 7ನೇ ಸ್ಥಾನಕ್ಕೆ ಜಿಗಿದಿದೆ. ಸದ್ಯ ಆಡಿರುವ 11 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು 8 ಅಂಕಗಳನ್ನು ಪಡೆದಿದೆ.

ಇದೀಗ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಪರಸ್ಪರ ಸೆಣಸಲಿವೆ. ಧರ್ಮಶಾಲಾದ ಎಚ್‌ಪಿಸಿಎ ಅಂಗಳದಲ್ಲಿ ಈ ಪಂದ್ಯ ನಡೆಯಲಿದೆ. ಧರ್ಮಶಾಲಾದಲ್ಲಿ ನಡೆದ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಪಂಜಾಬ್ ಪ್ಲೇ ಆಫ್ ಹಾದಿ ಕೂಡ ಕಠಿಣವಾಗಿದ್ದು, ಮುಂದಿನ ಎಲ್ಲ ಪಂದ್ಯಗಳಲ್ಲಿ ಗೆಲ್ಲಬೇಕಿದೆ. ಹೀಗಾಗಿ, ಮೇ 9 ರಂದು ನಡೆಯಲಿರುವ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ.

ಈ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಮುಖಾಮುಖಿಯಾಗಿದ್ದು, ಆರ್‌ಸಿಬಿ 4 ವಿಕೆಟ್‌ ಅಂತರದಿಂದ ಗೆದ್ದಿದೆ. ಪಂಜಾಬ್ ಕೂಡ ಆಡಿರುವ 11 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿದ್ದು, 8 ಅಂಕಗಳನ್ನು ಪಡೆದುಕೊಂಡಿದೆ. ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಐಪಿಎಲ್ 2024ನೇ ಆವೃತ್ತಿಯಲ್ಲಿ ಶಿಖರ್ ಧವನ್ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಆದಾಗ್ಯೂ, ಅವರು ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿದ್ದಾರೆ. ಇದೀಗ ಸ್ಯಾಮ್ ಕರಣ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಪಿಚ್ ಪರಿಸ್ಥಿತಿ

ಧರ್ಮಶಾಲಾದಲ್ಲಿರುವ ಎಚ್‌ಪಿಸಿಎ ಕ್ರೀಡಾಂಗಣದ ಪಿಚ್ ಉತ್ತಮ ಸ್ಕೋರಿಂಗ್ ಮೈದಾನವೆಂದು ಪರಿಗಣಿಸಲಾಗಿದೆ. ಈ ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಸಹಕಾರಿಯಾಗಿರುವ ಕಾರಣ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಸಹಕಾರಿಯಾಗಲಿದ್ದು, ಮೊದಲಿಗೆ ಬ್ಯಾಟರ್‌ಗಳು ಎಚ್ಚರಿಕೆಯಿಂದ ಆಡಬೇಕಿದೆ. ಎರಡೂ ತಂಡಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪಡೆ ಇರುವ ಕಾರಣ ಹೈಸ್ಕೋರಿಂಗ್ ಥ್ರಿಲ್ಲರ್ ಪಂದ್ಯವನ್ನು ನಿರೀಕ್ಷೆ ಮಾಡಬಹುದು.

ಪಂಜಾಬ್ ಕಿಂಗ್ಸ್ ತಮ್ಮ ಬ್ಯಾಟಿಂಗ್‌ನಲ್ಲಿ ಎಡವಿದ್ದು, ಅಗ್ರ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಸತತವಾಗಿ ವಿಫಲವಾಗಿದೆ. ತಂಡದ ಬೌಲರ್‌ಗಳು ಉತ್ತಮ ಪ್ರದರ್ಶನ ತೋರಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶಕ್ತಿಯುತ ಬ್ಯಾಟಿಂಗ್ ಪಡೆಯನ್ನು ಹೊಂದಿದೆ. ಆದರೆ, ಅವರ ಬೌಲರ್‌ಗಳು ಸಾಕಷ್ಟು ಹೆಣಗಾಡಿದ್ದಾರೆ. ಆದಾಗ್ಯೂ, ಇತ್ತೀಚಿನ ಪಂದ್ಯಗಳಲ್ಲಿ RCB ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.

ಯಾರು ಪಂದ್ಯ ಗೆಲ್ಲುತ್ತಾರೆ?

ಕಳೆದ ಕೆಲವು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅದ್ಭುತ ಪ್ರದರ್ಶನ ನೀಡಿದೆ. ಆರ್‌ಸಿಬಿ ತನ್ನ ಕೊನೆಯ ಮೂರು ಪಂದ್ಯಗಳನ್ನು ಗೆದ್ದು ಗೆಲುವಿನ ನಾಗಾಲೋಟದಲ್ಲಿದೆ. ಪಂಜಾಬ್ ತನ್ನ ಹಿಂದಿನ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಕಡಿಮೆ ರನ್ ಚೇಸ್ ಹೊರತಾಗಿಯೂ ಸೋತಿತು. ಆದ್ದರಿಂದ, ಆರ್‌ಸಿಬಿ ಈ ಪಂದ್ಯದಲ್ಲಿ ಪಂಜಾಬ್ ಅನ್ನು ಮಣಿಸುವ ನಿರೀಕ್ಷೆಯಿದೆ.

ಐಪಿಎಲ್ 2024 ಬಹುತೇಕ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಶೀಘ್ರದಲ್ಲೇ ಪ್ಲೇಆಫ್‌ಗೆ ತಂಡಗಳನ್ನು ನಿರ್ಧರಿಸಲಾಗುತ್ತದೆ. ಹೀಗಾಗಿ, RCB vs PBKS ಹಣಾಹಣಿಯು ನಿರ್ಣಾಯಕ ಮುಖಾಮುಖಿಯಾಗಲಿದೆ. ಪಂಜಾಬ್ ತನ್ನ ಹಿಂದಿನ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸೋತಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಆದರೆ, ಆರ್‌ಸಿಬಿ ಕಳೆದ ಬಾರಿಯಂತೆಯೇ ಈ ಬಾರಿಯೂ ತಾನೇ ಗೆಲುವು ಸಾಧಿಸುವ ತವಕದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT