ಜೇಮ್ಸ್ ಆ್ಯಂಡರ್ಸನ್ 
ಕ್ರಿಕೆಟ್

ಇಂಗ್ಲೆಂಡ್ ವೇಗಿ James Anderson ವಿದಾಯ: 22 ವರ್ಷಗಳ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ಲಾರ್ಡ್ಸ್ ನಲ್ಲಿ ತೆರೆ

ಇಂಗ್ಲೆಂಡ್ ಕ್ರಿಕೆಟ್ ನ ದಂತಕಥೆ ವೇಗಿ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಣೆ ಮಾಡಿದ್ದು, ವೆಸ್ಟ್ ಇಂಡೀಸ್ ವಿರುದ್ದ ಲಾರ್ಡ್ಸ್ ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿಯಾಗಲಿದ್ದಾರೆ.

ಲಂಡನ್: ಇಂಗ್ಲೆಂಡ್ ಕ್ರಿಕೆಟ್ ನ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಣೆ ಮಾಡಿದ್ದು, ವೆಸ್ಟ್ ಇಂಡೀಸ್ ವಿರುದ್ದ ಲಾರ್ಡ್ಸ್ ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿಯಾಗಲಿದ್ದಾರೆ.

ಹೌದು.. ಇಂಗ್ಲೆಂಡ್ ಕ್ರಿಕೆಟ್ ತಂಡದ ವೇಗಿ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಣೆ ಮಾಡಿದ್ದು, ಆ ಮೂಲಕ ತಮ್ಮ 22 ವರ್ಷಗಳ ಸುಧೀರ್ಘ ಕ್ರಿಕೆಟ್ ವೃತ್ತಿ ಜೀವನಕ್ಕೆ ಅಂತ್ಯ ಹಾಡಲಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಆ್ಯಂಡರ್ಸನ್, 'ಸತತ 22 ವರ್ಷಗಳ ಕಾಲ ನನ್ನ ದೇಶವನ್ನು ಜಾಗತಿಕ ವೇದಿಕೆಯಲ್ಲಿ ಪ್ರತಿನಿಧಿಸಿದ್ದೆ. ನಾನು ಚಿಕ್ಕವನಾಗಿದ್ದಾಗಿನಿಂದ ನಾನು ಇಷ್ಟಪಟ್ಟ ಆಟವನ್ನು ಆಡುತ್ತಿದ್ದೇನೆ. ನಾನು ಇಂಗ್ಲೆಂಡ್‌ ತಂಡದ ಹೊರಗುಳಿಯುವುದರಿಂದ ಸಾಕಷ್ಟು ಕಳೆದುಕೊಳ್ಳಲಿದ್ದೇನೆ'.

'ಆದರೆ ನಾನು ಪಕ್ಕಕ್ಕೆ ಸರಿಯಲು ಇದು ಸೂಕ್ತ ಸಮಯ. ನನ್ನಂತೆಯೇ ಇತರರು ಕೂಡ ತಮ್ಮ ಕನಸುಗಳನ್ನು ನನಸಾಗಿಸಲು ಅವಕಾಶ ಮಾಡಿಕೊಡಬೇಕು. ಮುಂದೆ ಇರುವ ಹೊಸ ಸವಾಲುಗಳಿಗೆ ನಾನು ಉತ್ಸುಕನಾಗಿದ್ದೇನೆ' ಎಂದು ಹೇಳಿದ್ದಾರೆ.

ಅಂತೆಯೇ ತಮ್ಮ ವೃತ್ತಿಜೀವನದುದ್ದಕ್ಕೂ ಅವರ ಬೆಂಬಲ ನಿಂತ ಕುಟುಂಬ, ತರಬೇತುದಾರರು ಮತ್ತು ಆಟಗಾರರಿಗೆ ಆ್ಯಂಡರ್ಸನ್ ಧನ್ಯವಾದಗಳನ್ನು ಅರ್ಪಿಸಿದರು.

ಅಂದಹಾಗೆ 2003ರಲ್ಲಿ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್ ಈ ವರೆಗೂ 187 ಟೆಸ್ಟ್ ಪಂದ್ಯವನ್ನಾಡಿದ್ದು, 700 ವಿಕೆಟ್ ಗಳನ್ನು ಕಬಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP