ದಿನೇಶ್ ಕಾರ್ತಿಕ್ ಡಕೌಟ್ 
ಕ್ರಿಕೆಟ್

IPL 2024: ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ಡಕೌಟ್, ಕಳಪೆ ದಾಖಲೆ ಬರೆದ RCBಯ Dinesh Karthik

ಐಪಿಎಲ್ ಟೂರ್ನಿಯ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪೋಟಕ ಬ್ಯಾಟರ್ ದಿನೇಶ್ ಕಾರ್ತಿಕ್ ಹೀನಾಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಬೆಂಗಳೂರು: ಐಪಿಎಲ್ ಟೂರ್ನಿಯ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪೋಟಕ ಬ್ಯಾಟರ್ ದಿನೇಶ್ ಕಾರ್ತಿಕ್ ಹೀನಾಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ನಿನ್ನೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ (IPL 2024) 62ನೇ ಪಂದ್ಯದ ಮೂಲಕ ದಿನೇಶ್ ಕಾರ್ತಿಕ್ (Dinesh Karthik) ಈ ಅನಗತ್ಯ ದಾಖಲೆ ಬರೆದಿದ್ದು, ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡಿಕೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.

ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಸೊನ್ನೆಗೆ ಔಟಾದ ಬ್ಯಾಟರ್ ಎಂಬ ಹೀನಾಯ ದಾಖಲೆಯೊಂದು ದಿನೇಶ್ ಕಾರ್ತಿಕ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ರೋಹಿತ್ ಶರ್ಮಾ ಹೆಸರಿನಲ್ಲಿದ್ದವು.

ಐಪಿಎಲ್​ನಲ್ಲಿ 127 ಇನಿಂಗ್ಸ್ ಆಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ಒಟ್ಟು 17 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಧಿಕ ಬಾರಿ ಡಕ್​ ಔಟ್ ಆದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಈವರೆಗೆ 251 ಇನಿಂಗ್ಸ್ ಆಡಿದ್ದು, ಈ ವೇಳೆ 17 ಬಾರಿ ಸೊನ್ನೆ ಸುತ್ತಿದ್ದಾರೆ. ಇದೀಗ ಮ್ಯಾಕ್ಸ್​ವೆಲ್ ಹಾಗೂ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಡಿಕೆ ಅಗ್ರಸ್ಥಾನಕ್ಕೇರಿದ್ದಾರೆ.

ಐಪಿಎಲ್​ನಲ್ಲಿ ಇದುವರೆಗೆ 232 ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 18 ಬಾರಿ ಡಕ್​ ಔಟ್ ಆಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಅನಗತ್ಯ ದಾಖಲೆ ನಿರ್ಮಿಸಿದ್ದಾರೆ.

Most ducks in the IPL

  • 18 - Dinesh Karthik

  • 17 - Glenn Maxwell

  • 17 - Rohit Sharma

  • 16 - Piyush Chawla

  • 16 - Sunil Narine

ಆರ್‌‌ಸಿಬಿ ಮೊದಲು ಬ್ಯಾಟಿಂಗ್‌ ಮಾಡಿ ನಿಗದಿತ 20 ಓವರ್‌ಗೆ 9 ವಿಕೆಟ್ ನಷ್ಟಕ್ಕೆ 187 ರನ್‌ ಸಿಡಿಸಿತು. ಈ ಟಾರ್ಗೆಟ್‌‌ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 19.1 ಓವರ್‌ಗೆ 10 ವಿಕೆಟ್ ನಷ್ಟಕ್ಕೆ 140 ರನ್‌ ಗಳಿಸುವ ಮೂಲಕ 47 ರನ್‌ಗಳ ಸೋಲನ್ನಪ್ಪಿತು. ಈ ಭರ್ಜರಿ ಗೆಲುವಿನ ಮೂಲಕ ಆರ್‌‌ಸಿಬಿ ಪಡೆ ಅಂಕಪಟ್ಟಿಯಲ್ಲಿ +0.39ರ ರನ್‌ರೇಟ್‌‌ ಜೊತೆಗೆ ಆಡಿರುವ 13 ಪಂದ್ಯದಲ್ಲಿ 6ರಲ್ಲಿ ಗೆದ್ದು 7ರಲ್ಲಿ ಸೋಲನ್ನಪ್ಪಿದೆ. ಈ ಮೂಲಕ ಆರ್‌ಸಿಬಿ ತಂಡ 5ನೇ ಸ್ಥಾನಕ್ಕೆ ಜಿಗಿದಿದೆ. ಅಲ್ಲದೇ ಈ ಗೆಲುವಿನ ಮೂಲಕ ಆರ್‌‌ಸಿಬಿ ಈ ಬಾರಿಯ ಪ್ಲೇಆಫ್‌ ರೇಸ್‌‌ನಲ್ಲಿ ಇನ್ನೂ ಸಹ ಉಳಿದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT