ಆರ್ ಸಿಬಿ ಬ್ಯಾಟಿಂಗ್ 
ಕ್ರಿಕೆಟ್

IPL 2024: RCB ಭರ್ಜರಿ ಬ್ಯಾಟಿಂಗ್, ಚೆನ್ನೈ ಗೆಲ್ಲಲು 219 ರನ್ ಬೃಹತ್ ಗುರಿ

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ಗೆ ಗೆಲ್ಲಲು 219ರನ್ ಗಳ ಬೃಹತ್ ಗುರಿ ನೀಡಿದೆ.

ಬೆಂಗಳೂರು: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ಗೆ ಗೆಲ್ಲಲು 219ರನ್ ಗಳ ಬೃಹತ್ ಗುರಿ ನೀಡಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ತಂಡ ನಿಗಧಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 219ರನ್ ಗಳ ಬೃಹತ್ ಗುರಿ ನೀಡಿದೆ.

ಆರ್ ಸಿಬಿ ಪರ ವಿರಾಟ್ ಕೊಹ್ಲಿ 47 ರನ್ ಗಳಿಸಿ ಅರ್ಧಶತಕ ಮಿಸ್ ಮಾಡಿಕೊಂಡರೆ, ನಾಯಕ್ ಫಾಪ್ ಡುಪ್ಲೆಸಿಸ್ 39 ಎಸೆತಗಳಲ್ಲಿ 54 ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ರಜತ್ ಪಾಟಿದಾರ್ 23 ಎಸೆತಗಳಲ್ಲಿ 41 ರನ್ ಸಿಡಿಸಿದರು. ಕೆಮರಾನ್ ಗ್ರೀನ್ 17 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 3 ಬೌಂಡರಿಗಳ ನೆರವಿನಿಂದ ಅಜೇಯ 38 ರನ್ ಸಿಡಿಸಿದರು.

ಅಂತಿಮವಾಗಿ ಆರ್ ಸಿಬಿ ತಂಡ ನಿಗಧಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿ ಚೆನ್ನೈಗೆ ಗೆಲ್ಲಲು 219ರನ್ ಗಳ ಬೃಹತ್ ಗುರಿ ನೀಡಿದೆ.

ಅಂದಹಾಗೆ ಆರ್ ಸಿಬಿ ಪ್ಲೇ ಆಫ್ ಗೇರಲು ಈ ಪಂದ್ಯವನ್ನು ಕನಿಷ್ಟ 18 ರನ್ ಗಳ ಅಂತರದಲ್ಲಿ ಗೆಲ್ಲಲೇಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ: ವಿಂಡೀಸ್ ವಿರುದ್ಧ ಗೆಲುವು; T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್