ಆರ್‌ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ 
ಕ್ರಿಕೆಟ್

IPL 2024: ಸಿಎಸ್‌ಕೆ ವಿರುದ್ಧ ಆರ್‌ಸಿಬಿಗೆ ಗೆಲುವು: ತಡರಾತ್ರಿವರೆಗೂ ಬೆಂಗಳೂರಿನ ಬೀದಿಗಳಲ್ಲಿ ನಿಲ್ಲದ ವಿಜಯೋತ್ಸವ

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ 27 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.

ಪಂದ್ಯಾವಳಿಯ ಆರಂಭದಲ್ಲಿ ಆಡಿದ್ದ 8 ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆಲುವು ಸಾಧಿಸುವ ಮೂಲಕ ನಿರಾಶದಾಯಕ ಪ್ರದರ್ಶನ ನೀಡಿದ್ದ ಆರ್‌ಸಿಬಿ ಆನಂತರ ಹಿಂತಿರುಗಿ ನೋಡಿದ್ದೇ ಇಲ್ಲ. ಇದೀಗ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸತತ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದ ಆರ್‌ಸಿಬಿ ಇದೀಗ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಸಿಎಸ್‌ಕೆ ವಿರುದ್ಧದ ರೋಚಕ ಜಯದ ನಂತರ ಆರ್‌ಸಿಬಿ ಅಭಿಮಾನಿಗಳು ಮತ್ತು ಆಟಗಾರರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಬೆಂಗಳೂರಿನ ರಸ್ತೆ ರಸ್ತೆಗಳಲ್ಲಿ ಮಧ್ಯರಾತ್ರಿಯವರೆಗೂ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು.

ಮಳೆಯ ನಡುವೆಯೂ ತಡರಾತ್ರಿಯವರೆಗೂ ಬೆಂಗಳೂರಿನ ಬೀದಿಗಳಲ್ಲಿಯೇ ಬೀಡುಬಿಟ್ಟಿದ್ದ ಅಭಿಮಾನಿಗಳು, ಪರಸ್ಪರ ಅಪ್ಪಿಕೊಂಡು ವಿಜಯೋತ್ಸವ ಆಚರಿಸಿದರು. ಅಭಿಮಾನಿಗಳ ಒಂದು ವಿಭಾಗವು ತಡರಾತ್ರಿಯಲ್ಲಿ ಆರ್‌ಸಿಬಿ ಆಟಗಾರರನ್ನು ಹೊತ್ತಿದ್ದ ಬಸ್ ಹೊರಬರಲು ಕಾಯುತ್ತಿದ್ದರು ಮತ್ತು ಸಿಎಸ್‌ಕೆ ವಿರುದ್ಧದ ವಿಜಯಕ್ಕಾಗಿ ಅವರನ್ನು ಅಭಿನಂದಿಸಿದರು.

ಪ್ಲೇಆಫ್‌ಗೆ ಅರ್ಹತೆ ಪಡೆಯಲು ಆರ್‌ಸಿಬಿ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ 18 ರನ್‌ಗಳಿಂದ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಅಂತಿಮ ಓವರ್‌ನಲ್ಲಿ ಯಶ್ ದಯಾಳ್ ಅತ್ಯುತ್ತಮವಾದ ಬೌಲಿಂಗ್ ತಂಡದ ಗೆಲುವಿಗೆ ಸಾಧ್ಯವಾಯಿತು. ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಧೋನಿ, ಎರಡನೇ ಎಸೆತದಲ್ಲಿ ತಮ್ಮ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್‌ಗೆ ಬಂದ ಶಾರ್ದೂಲ್ ಠಾಕುರ್ ಅವರಿಗೆ ಮೂರನೇ ಎಸೆತದಲ್ಲಿ ಡಾಟ್ ಬಾಲ್ ನೀಡಿದರು. ನಾಲ್ಕನೇ ಎಸೆತದಲ್ಲಿ ಒಂದು ರನ್ ಪಡೆದರು. ಬಳಿಕ ಎರಡೂ ಎಸೆತಗಳು ಡಾಟ್ ಬಾಲ್ ಎಸೆಯುವ ಮೂಲಕ ಯಶ್ ದಯಾಶ್ ಚೆನ್ನೈ ವಿರುದ್ಧ 27 ರನ್ ಗೆಲುವು ಸಾಧಿಸಲು ನೆರವಾದರು.

ಅಂಕಪಟ್ಟಿಯಲ್ಲಿ ಅಗ್ರ ಮೂರು ಸ್ಥಾನಗಳನ್ನು ಸೀಲ್ ಮಾಡಿರುವ ಕೆಕೆಆರ್, ಆರ್ ಮತ್ತು ಎಸ್‌ಆರ್‌ಎಚ್ ತಂಡಗಳು ಭಾನುವಾರ ಲೀಗ್ ಹಂತದ ತಮ್ಮ ಕೊನೆಯ ಪಂದ್ಯಗಳಲ್ಲಿ ಆಡಲಿವೆ. ಕೆಕೆಆರ್ ತಂಡ ಟಾಪ್ 2ರಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದ್ದು, ಆರ್‌ಆರ್ ಮತ್ತು ಎಸ್‌ಆರ್‌ಎಚ್ 2ನೇ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT