ಅನುಷ್ಕಾ ಶರ್ಮಾ - ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2024: ಪ್ಲೇಆಫ್‌ಗೆ RCB ಲಗ್ಗೆ; ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಕಣ್ಣೀರು!

ಐಪಿಎಲ್ 2024ನೇ ಆವೃತ್ತಿಯ ಆರಂಭದಲ್ಲಿ ಆಡಿದ್ದ 8 ಪಂದ್ಯಗಳಲ್ಲಿ 6ರಲ್ಲಿ ಸೋತು ಇನ್ನೇನು ಟೂರ್ನಿಯಿಂದ ಹೊರಗುಳಿಯಿತು ಎನ್ನುಕೊಳ್ಳುವಷ್ಟರಲ್ಲೇ ಮತ್ತೆ ಆಡಿದ ಎಲ್ಲ ಐದು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸುವ ಮೂಲಕ ಪ್ಲೇಆಫ್ ಕನಸನ್ನು ಜೀವಂತವಾಗಿಟ್ಟುಕೊಂಡಿದ್ದ ಆರ್‌ಸಿಬಿ ಇದೀಗ ಫೀನಿಕ್ಸ್‌ನಂತೆ ಮೇಲಕ್ಕೆದ್ದು ಪ್ಲೇಆಫ್ ಸ್ಥಾನವನ್ನು ಗಳಿಸಿತು. ತಂಡದ ಗೆಲುವಿಗೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಕಣ್ಣೀರು ಹಾಕಿರುವ ದೃಶ್ಯಗಳು ಕಂಡುಬಂತು.

ಐಪಿಎಲ್ 2024ನೇ ಆವೃತ್ತಿಯ ಆರಂಭದಲ್ಲಿ ಆಡಿದ್ದ 8 ಪಂದ್ಯಗಳಲ್ಲಿ 6ರಲ್ಲಿ ಸೋತು ಇನ್ನೇನು ಟೂರ್ನಿಯಿಂದ ಹೊರಗುಳಿಯಿತು ಎನ್ನುಕೊಳ್ಳುವಷ್ಟರಲ್ಲೇ ಮತ್ತೆ ಆಡಿದ ಎಲ್ಲ ಐದು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸುವ ಮೂಲಕ ಪ್ಲೇಆಫ್ ಕನಸನ್ನು ಜೀವಂತವಾಗಿಟ್ಟುಕೊಂಡಿದ್ದ ಆರ್‌ಸಿಬಿ ಇದೀಗ ಫೀನಿಕ್ಸ್‌ನಂತೆ ಮೇಲಕ್ಕೆದ್ದು ಪ್ಲೇಆಫ್ ಸ್ಥಾನವನ್ನು ಗಳಿಸಿತು. ತಂಡದ ಗೆಲುವಿಗೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಕಣ್ಣೀರು ಹಾಕಿರುವ ದೃಶ್ಯಗಳು ಕಂಡುಬಂತು.

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಹಾಲಿ ಚಾಂಪಿಯನ್‌ ವಿರುದ್ಧ ಜಯಗಳಿಸಿತು. ಸಿಎಸ್‌ಕೆ ತಂಡವನ್ನು 27 ರನ್‌ಗಳಿಂದ ಸೋಲಿಸಿ ಪ್ಲೇಆಫ್‌ನಲ್ಲಿ ನಾಲ್ಕನೇ ಮತ್ತು ಅಂತಿಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಈಗಾಗಲೇ ಪ್ಲೇ-ಆಫ್‌ಗೆ ಅರ್ಹತೆ ಪಡೆದಿವೆ.

ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ ಓವರ್‌ಗಳಲ್ಲಿ ಐದು ವಿಕೆಟ್‌ ನಷ್ಟಕ್ಕೆ 218 ರನ್ ಕಲೆಹಾಕಿತು. ನಾಯಕ ಫಾಫ್ ಡು ಪ್ಲೆಸಿಸ್ (54) ಮತ್ತು ವಿರಾಟ್ ಕೊಹ್ಲಿ (47) 78 ರನ್‌ಗಳ ಜೊತೆಯಾಟವಾಡಿದರು.

3ನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಬಂದ ರಜತ್ ಪಾಟಿದಾರ್ 23 ಎಸೆತಗಳಲ್ಲಿ 41 ರನ್ ಗಳಿಸಿದರು ಮತ್ತು ಕ್ಯಾಮರೂನ್ ಗ್ರೀನ್ 17 ಎಸೆತಗಳಳ್ಲಿ ಔಟಾಗದೆ 38 ರನ್ ಗಳಿಸಿ ತಂಡಕ್ಕೆ ನೆರವಾದರು. ಈ ಇಬ್ಬರು 71 ರನ್‌ ಜೊತೆಯಾಟವಾಡಿದುರು. ಕೊನೆಯಲ್ಲಿ, ದಿನೇಶ್ ಕಾರ್ತಿಕ್ (6 ಎಸೆತಗಳಲ್ಲಿ 14) ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ (5 ಎಸೆತಗಳಲ್ಲಿ 16) ತಂಡ ಬೃಹತ್ ಮೊತ್ತ ಗಳಿಸುವಲ್ಲಿ ಕೊಡುಗೆ ನೀಡಿದರು.

ಆರ್‌ಸಿಬಿ ವಿರುದ್ಧದ ಈ ಪಂದ್ಯವನ್ನು ಸೋತಿದ್ದರೂ ಉತ್ತಮ ನೆಟ್ ರನ್ ರೇಟ್ ಹೊಂದಿದ್ದ ಕಾರಣದಿಂದಾಗಿ ಸಿಎಸ್‌ಕೆ ಪ್ಲೇಆಫ್ ಪ್ರವೇಶಿಸುವ ಸಾಧ್ಯತೆ ಇತ್ತು. ಆದರೆ, ಆರ್‍‌ಸಿಬಿ ನೀಡಿದ 219ರನ್ ಗುರಿ ಬೆನ್ನತ್ತಿದ್ದ ಚೆನ್ನೈ, 7 ವಿಕೆಟ್‌ ನಷ್ಟಕ್ಕೆ ಕೇವಲ 191 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಈ ಮೂಲಕ ಚೆನ್ನೈ ಪ್ಲೇಆಫ್‌ನಿಂದ ಹೊರಬಿತ್ತು.

ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ

ಅನುಷ್ಕಾ ಶರ್ಮಾ ಭಾವುಕ

ಆರ್‌ಸಿಬಿಯ ಗೆಲುವಿನ ನಂತರ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಭಾವುಕರಾದರು. ಪಂದ್ಯ ವೀಕ್ಷಿಸಲು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿದ್ದ ಅನುಷ್ಕಾ ಶರ್ಮಾ, ತಂಡವನ್ನು ಹುರಿದುಂಬಿಸುತ್ತಿದ್ದರು. ಸಿಎಸ್‌ಕೆ ವಿರುದ್ಧ ಗೆಲ್ಲುತ್ತಿದ್ದಂತೆ ಒಂದೆಡೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದರೆ, ವಿರಾಟ್ ಕೊಹ್ಲಿ ಅವರ ಸಂಭ್ರಮ ಆಕರ್ಷಣೀಯವಾಗಿತ್ತು. ತಂಡ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ ಎನ್ನುತ್ತಿದ್ದಂತೆ ತೀವ್ರ ಭಾವುಕರಾದರು ಮತ್ತು ಮೈದಾನದಲ್ಲೇ ಕಣ್ಣೀರು ಹಾಕಿದರು. ಇವರ ಜೊತೆ ಅನುಷ್ಕಾ ಶರ್ಮಾ ಕೂಡ ಭಾವುಕರಾಗಿರುವ ದೃಶ್ಯಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT