ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ 
ಕ್ರಿಕೆಟ್

Welcome ''Nandini'': ICC T20 World Cup ಟೂರ್ನಿ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ!

ಟಿ20 ವಿಶ್ವಕಪ್ ಟೂರ್ನಿ ನಿಮಿತ್ತ ಐರ್ಲೆಂಡ್ ತಂಡ ಕರ್ನಾಟಕ ಹಾಲು ಮಹಾಮಂಡಳಿ ''ನಂದಿನಿ''ಯ ಲೋಗೋ ಇರುವ ಜೆರ್ಸಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ನವದೆಹಲಿ: ಟಿ20 ವಿಶ್ವಕಪ್ ಟೂರ್ನಿ ನಿಮಿತ್ತ ಐರ್ಲೆಂಡ್ ತಂಡ ಕರ್ನಾಟಕ ಹಾಲು ಮಹಾಮಂಡಳಿ ''ನಂದಿನಿ''ಯ ಲೋಗೋ ಇರುವ ಜೆರ್ಸಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಹೌದು.. ಕೆಲವು ದಿನಗಳ ಹಿಂದಷ್ಟೇ ನಂದಿನಿ ಲೋಗೋ(KMF Nandini Logo) ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿತ್ತು. ಇದೀಗ ಐರ್ಲೆಂಡ್(Ireland) ತಂಡ ಕೂಡ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಪ್ರಕಟಿಸಿದೆ.

ಇದು ಮಾತ್ರವಲ್ಲದೆ ಕ್ರಿಕೆಟ್​ ಐರ್ಲೆಂಡ್ ತನ್ನ ಅಧಿಕೃತ ವೆಬ್​ಸೈಟ್​ನ ಫೋಟೊದಲ್ಲಿಯೂ ನಂದಿನಿ ಲೋಗೋ ಇರುವ ಜೆರ್ಸಿಯ ದೊಡ್ಡ ಫೋಟೊವನ್ನು ಹಾಕಿ ‘ವೆಲ್​ಕಮ್​ ನಂದಿನಿ' (WELCOME NANDINI) ಎಂದು ಬರೆದುಕೊಂಡಿದೆ.

ನಂದಿನಿಗೆ ಸ್ವಾಗತ ಕೋರಿದ ಐರ್ಲೆಂಡ್

ಇನ್ನು ಜೆರ್ಸಿ ಬಿಡುಗಡೆಯ ಬಳಿಕ ಮಾತನಾಡಿದ, ಕ್ರಿಕೆಟ್ ಐರ್ಲೆಂಡ್‌ನ ಮುಖ್ಯ ಹಣಕಾಸು ಅಧಿಕಾರಿ ಆ್ಯಂಡ್ರ್ಯೂ ಮೇ,” ಕರ್ನಾಟಕ ಹಾಲು ಒಕ್ಕೂಟವನ್ನು ಹೊಸ ಪಾಲುದಾರರಾಗಿ ಸ್ವಾಗತಿಸಲು ನಮಗೆ ಸಂತೋಷವಾಗುತ್ತಿದೆ. ಟಿ–20 ವಿಶ್ವಕಪ್‌ನಲ್ಲಿ ಐರ್ಲೆಂಡ್ ಪುರುಷರ ತಂಡದ ಅಧಿಕೃತ ಪ್ರಾಯೋಜಕರಾಗಿ ನಂದಿನಿಯನ್ನು ಘೋಷಿಸಲು ಸಂತಸವಾಗುತ್ತಿದೆ” ಎಂದರು.

ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ. ಶುದ್ಧತೆ ಮತ್ತು ಶ್ರೇಷ್ಠತೆಯ ಪ್ರತೀಕವಾಗಿರುವ ನಂದಿನಿಯು ಈಗ ಜಾಗತಿಕ ಬ್ರ್ಯಾಂಡ್‌ ಆಗಿ ಗುರುತಿಸಿಕೊಳ್ಳುವುದಕ್ಕೆ ಹೆಮ್ಮೆ ಎನಿಸುತ್ತದೆ. ಈ ಮೂಲಕ ನಂದಿನಿಯ ಮೌಲ್ಯ ಮತ್ತು ಜನಪ್ರಿಯತೆ ಮತ್ತಷ್ಟು ಹೆಚ್ಚಾಗಲಿದ್ದು, ಜನಪ್ರಿಯ ಕ್ರೀಡೆಯಾದ ಕ್ರಿಕೆಟ್‌ ತಂಡದ ಪ್ರಾಯೋಜಕತ್ವದಿಂದಾಗಿ ನಂದಿನಿ ಲೋಗೋ ವಿಶ್ವವ್ಯಾಪಿ ರಾರಾಜಿಸಲಿದೆ ಎಂದು ಹೇಳಿದರು.

ಆಟಗಾರರ ತೋಳಲ್ಲಿ ನಂದಿನಿ ಲೋಗೋ

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT