ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2024: Virat Kohli ಮತ್ತೊಂದು ದಾಖಲೆ, ಐಪಿಎಲ್ ನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ!

ಹಾಲಿ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದು, ಐಪಿಎಲ್ ನಲ್ಲಿ 8 ಸಾವಿರ ರನ್ ಗಳಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಅಹ್ಮದಾಬಾದ್: ಹಾಲಿ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದು, ಐಪಿಎಲ್ ನಲ್ಲಿ 8 ಸಾವಿರ ರನ್ ಗಳಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇಂದು ಅಹ್ಮದಾಬಾದ್ ನಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಕಲೆಹಾಕಿದ ವಿರಾಟ್ ಕೊಹ್ಲಿ, ಐಪಿಎಲ್ ನಲ್ಲಿ ತಮ್ಮ ರನ್ ಗಳಿಕೆಯನ್ನು 8 ಸಾವಿರ ಗಡಿ ದಾಟಿದರು.

ಆ ಮೂಲಕ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಕೀರ್ತಿಗೂ ಭಾಜನರಾದರು. ಕೊಹ್ಲಿ ನಂತರದ ಸ್ಥಾನದಲ್ಲಿ ಶಿಖರ್ ಧವನ್ ಇದ್ದು, ಧವನ್ ಒಟ್ಟು 6769 ರನ್ ಗಳಿಸಿದ್ದಾರೆ.

ಹಾಲಿ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಒಟ್ಟು 15 ಪಂದ್ಯಗಳಿಂದ 61.75 ಸರಾಸರಿಯಲ್ಲಿ 741 ರನ್ ಗಳಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 2ನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಇದ್ದು ಅವರು 14 ಪಂದ್ಯಗಳಿಂದ 583 ರನ್ ಕಲೆಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!