ಹೆಟ್ಮೆಯರ್ 
ಕ್ರಿಕೆಟ್

ಐಪಿಎಲ್ ನಿಯಮ ಉಲ್ಲಂಘನೆ: ಹೆಟ್ಮೆಯರ್ ಗೆ ಪಂದ್ಯ ಶುಲ್ಕದ ಶೇ.10 ರಷ್ಟು ದಂಡ!

ಚೆನ್ನೈನಲ್ಲಿ ಶುಕ್ರವಾರ ರಾತ್ರಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದ ವೇಳೆ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್‌ನ ಶಿಮ್ರಾನ್ ಹೆಟ್ಮೆಯರ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ. ಸನ್ ರೈಸರ್ಸ್ ಹೈದ್ರಾಬಾದ್ 36 ರನ್ ಗಳಿಂದ ಪಂದ್ಯ ಗೆದ್ದುಕೊಂಡಿತ್ತು.

ಚೆನ್ನೈ: ಚೆನ್ನೈನಲ್ಲಿ ಶುಕ್ರವಾರ ರಾತ್ರಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದ ವೇಳೆ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್‌ನ ಶಿಮ್ರಾನ್ ಹೆಟ್ಮೆಯರ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ. ಸನ್ ರೈಸರ್ಸ್ ಹೈದ್ರಾಬಾದ್ 36 ರನ್ ಗಳಿಂದ ಪಂದ್ಯ ಗೆದ್ದುಕೊಂಡಿತ್ತು.

ಹೆಟ್ಮೆಯರ್‌ಗೆ ಏಕೆ ದಂಡ ವಿಧಿಸಲಾಯಿತು ಎಂಬುದನ್ನು ಆಯೋಜಕರು ನಿರ್ದಿಷ್ಟಪಡಿಸದಿದ್ದರೂ, ಅವರು ಔಟಾದ ನಂತರ ತೋರಿದ ವರ್ತನೆಗೆ ದಂಡ ವಿಧಿಸಬರಹುದು ಎನ್ನಲಾಗಿದೆ. 14 ನೇ ಓವರ್‌ನಲ್ಲಿ ಅಭಿಷೇಕ್ ಶರ್ಮಾ ಬೌಲ್ಡ್ ಮಾಡಿದ ನಂತರ, ಹೆಟ್ಮೆಯರ್ ಹತಾಶೆಯಿಂದ ಸ್ಟಂಪ್‌ಗಳನ್ನು ಚೂರು ಮಾಡಲು ಪ್ರಯತ್ನಿಸಿದರು.

ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್‌ನ ಶಿಮ್ರಾನ್ ಹೆಟ್ಮೆಯರ್ ಅವರಿಗೆ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

"Hetmyer IPL ನೀತಿ ಸಂಹಿತೆಯ ಆರ್ಟಿಕಲ್ 2.2 ಅಡಿಯಲ್ಲಿ ಲೆವೆಲ್ 1 ಅಪರಾಧವೆಸಗಿದ್ದಾರೆ. ಅವರು ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಪಂದ್ಯದ ರೆಫರಿಯ ನಿರ್ಧಾರ ಅಂತಿಮ ಮತ್ತು ಬದ್ಧವಾಗಿರುವುದಾಗಿ ಅವರು ಹೇಳಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ, ಸಿದ್ದರಾಮಯ್ಯ ಭಾಗವಹಿಸುತ್ತಾರಾ?

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ! Video

ಕಲಬುರಗಿ: ನಡುರಸ್ತೆಯಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆ; ಶವದ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಪತಿಯ ಬಂಧನ

SCROLL FOR NEXT