ಕೆಕೆಆರ್ ತಂಡ PTI
ಕ್ರಿಕೆಟ್

IPL 2024 KKR Champion: ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್

ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಮೂರನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದು ಬೀಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಮೂರನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದು ಬೀಗಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಮತ್ತು ಗೌತಮ್ ಗಂಭೀರ್ ಮಾರ್ಗದರ್ಶನದ ಕೆಕೆಆರ್ ತಂಡ ಭಾನುವಾರ ನಡೆದ ಫೈನಲ್‌ನಲ್ಲಿ 2016ರ ಚಾಂಪಿಯನ್ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ಅನ್ನು 8 ವಿಕೆಟ್‌ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬೌಲಿಂಗ್ ಮಾಡಿದ ಕೋಲ್ಕತ್ತಾ, ಐಪಿಎಲ್ ಫೈನಲ್‌ನಲ್ಲಿ ಹೈದರಾಬಾದ್ ತಂಡವನ್ನು 18.3 ಓವರ್‌ಗಳಲ್ಲಿ 113 ರನ್‌ಗಳ ಕನಿಷ್ಠ ಸ್ಕೋರ್‌ಗೆ ಆಲೌಟ್ ಮಾಡಿ ನಂತರ 10.3 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 114 ರನ್ ಬಾರಿಸಿ ಪ್ರಶಸ್ತಿ ಗೆದ್ದುಕೊಂಡಿತು.

ಕೋಲ್ಕತ್ತಾ ತಂಡ ಐಪಿಎಲ್ ಇತಿಹಾಸದಲ್ಲಿ ಮೂರನೇ ಬಾರಿಗೆ ಪ್ರಶಸ್ತಿ ಜಯಿಸಿದೆ. ಈ ಹಿಂದೆ 2012 ಮತ್ತು 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಐಪಿಎಲ್ ಟ್ರೋಫಿ ಗೆದ್ದಿತ್ತು. ಎರಡನೇ ಬಾರಿಗೆ ಐಪಿಎಲ್ ಪ್ರಶಸ್ತಿ ಗೆಲ್ಲುವ ಸನ್ ರೈಸರ್ಸ್ ಹೈದರಾಬಾದ್ ಕನಸು ಭಗ್ನಗೊಂಡಿದೆ.

114 ರನ್‌ಗಳ ಅಲ್ಪ ಮೊತ್ತದ ಗುರಿಯನ್ನು ಬೆನ್ನಟ್ಟಿದ ಕೆಕೆಆರ್‌ಗೆ ಉತ್ತಮ ಆರಂಭ ಸಿಗಲಿಲ್ಲ. ಸುನಿಲ್ ನರೈನ್ ತಮ್ಮ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿ ಎರಡನೇ ಎಸೆತದಲ್ಲಿ ಔಟಾದರು. ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ನರೈನ್ ಅವರ ಬ್ಯಾಟ್ ಮತ್ತೊಮ್ಮೆ ಮೌನವಾಗಿತ್ತು. ಆ ನಂತರ ರಹಮಾನುಲ್ಲಾ ಗುರ್ಬಾಜ್ ಒಂದು ತುದಿಯಿಂದ ದೃಢವಾಗಿ ನಿಂತರು. ಇನ್ನೊಂದು ತುದಿಯಲ್ಲಿ ವೆಂಕಟೇಶ್ ಅಯ್ಯರ್ ಅಜೇಯ 52 ರನ್ ಬಿರುಸಿನ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿದರು.

ಗುರ್ಬಾಜ್ ಮತ್ತು ಅಯ್ಯರ್ ಜೋಡಿಯು ಪವರ್‌ಪ್ಲೇ ಓವರ್‌ಗಳಲ್ಲಿ ತಂಡದ ಸ್ಕೋರ್ ಅನ್ನು ಒಂದು ವಿಕೆಟ್‌ಗೆ 72 ರನ್‌ಗಳಿಗೆ ಕೊಂಡೊಯ್ದರು. 32 ಎಸೆತಗಳಲ್ಲಿ 39 ರನ್ ಗಳಿಸಿದ ಗುರ್ಬಾಜ್ 9ನೇ ಓವರ್‌ನಲ್ಲಿ ಔಟಾದರು. ಆದರೆ ಸ್ಕೋರ್‌ಬೋರ್ಡ್‌ನಲ್ಲಿ ಇಷ್ಟು ರನ್‌ಗಳು ದಾಖಲಾಗಿದ್ದರಿಂದ ಕೆಕೆಆರ್‌ನ ಗೆಲುವು ಖಚಿತವಾಗಿತ್ತು. ಅಂತಿಮವಾಗಿ, 11ನೇ ಓವರ್‌ನಲ್ಲಿ ಮೂರು ಸಿಂಗಲ್ಸ್‌ಗಳನ್ನು ತೆಗೆದುಕೊಳ್ಳುವ ಮೂಲಕ, KKR ಬ್ಯಾಟ್ಸ್‌ಮನ್‌ಗಳು 8 ವಿಕೆಟ್‌ಗಳಿಂದ ತಮ್ಮ ಗೆಲುವನ್ನು ಖಚಿತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT