ಶ್ರೇಯಸ್ ಅಯ್ಯರ್- ಪ್ಯಾಟ್ ಕಮಿನ್ಸ್ 
ಕ್ರಿಕೆಟ್

IPL 2024 ಫೈನಲ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸನ್ ರೈಸರ್ಸ್ ಹೈದರಾಬಾದ್

ಸುಮಾರು ಎರಡೂ ತಿಂಗಳಿನಿಂದ ದೇಶದ ಕ್ರಿಕೆಟ್ ಅಭಿಮಾನಿಗಳು ರಂಜಿಸಿದ IPL 2024 ಟೂರ್ನಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಇಲ್ಲಿನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ನಡುವೆ ಫೈನಲ್ ಕದನ ನಡೆಯುತ್ತಿದೆ.

ಚೆನ್ನೈ: ಸುಮಾರು ಎರಡೂ ತಿಂಗಳಿನಿಂದ ದೇಶದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ IPL 2024 ಟೂರ್ನಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಇಲ್ಲಿನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ನಡುವೆ ಫೈನಲ್ ಕದನ ನಡೆಯುತ್ತಿದೆ. ಟ್ರೋಫಿ ಮುಡಿಗೇರಿಸಿಕೊಳ್ಳಲು ಉಭಯ ತಂಡಗಳು ತೀವ್ರ ಪೈಪೋಟಿ ನಡೆಸುತ್ತಿವೆ.

ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ನಾಯಕ ಪ್ಯಾಟ್ ಕಮಿನ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡರು. ಟಾಸ್ ಸೋತ ನಂತರ ನಿರಾಸೆಗೊಳದ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ಬೌಲಿಂಗ್ ಮಾಡುತ್ತಿದೆ.

ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಕೆಕೆಆರ್ ಹಾಗೂ ಮೊದಲ ಕ್ವಾಲಿಫೈಯರ್ ನಲ್ಲಿ ಸೋತಿದ್ದ ಹೈದರಾಬಾದ್, 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಇಂದಿನ ಪಂದ್ಯದಲ್ಲಿ ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅಬ್ದುಲ್ ಸಮದ್ ಬದಲು ಶಬಾಜ್ ಅಹ್ಮದ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಕೋಲ್ಕತ್ತ ತಂಡ ಮೊದಲ ಕ್ವಾಲಿಫೈಯರ್ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡ ಇಂತಿದೆ: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡನ್ ಮರ್ಕ್ರಮ್ , ನಿತೀಶ್ ರೆಡ್ಡಿ, ಹೆರ್ನಿಚ್ ಕ್ಲಾಸೆನ್, ಶಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್, ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕಟ್, ಟಿ ನಟರಾಜನ್.

ಕೆಕೆಆರ್ ತಂಡ ಇಂತಿದೆ: ರಹಮಾನುಲ್ಲಾ ಗುರ್ಬಾಜ್, ಸುನಿಲ್ ನಾರಾಯಣ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಆ್ಯಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ